ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರಂಪ್‌ಗಿಂತ ಹ್ಯಾರಿಸ್‌ಗೆ ಮುನ್ನಡೆ: ಸಮೀಕ್ಷೆ

Published 24 ಜುಲೈ 2024, 14:26 IST
Last Updated 24 ಜುಲೈ 2024, 14:26 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಕಣದಿಂದ ಹಿಂದೆ ಸರಿದು, ಅಧ್ಯಕ್ಷೀಯ ಚುನಾವಣೆಗೆ ಕಮಲಾ ಹ್ಯಾರಿಸ್‌ ಅವರಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ, ಕಮಲಾ ಅವರು ತಮ್ಮ ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಅಧ್ಯಕ್ಷರಾಗಿ ಮರು ಆಯ್ಕೆಯಾಗಲು ಬಯಸಿದ್ದ ಬೈಡನ್‌ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಭಾನುವಾರ ಘೋಷಿಸಿದ್ದರು. ಇದರಿಂದಾಗಿ ಕಮಲಾ ಹ್ಯಾರಿಸ್‌ ಅವರು ಡೆಮಾಕ್ರಟಿಕ್‌ ಪಕ್ಷದ ಸಂಭವನೀಯ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಸೋಮವಾರ ಮತ್ತು ಮಂಗಳವಾರ ಹೊಸ ಸಮೀಕ್ಷೆ ನಡೆಸಲಾಗಿತ್ತು. 

ಹಿಂದಿನ ವಾರದ ಸಮೀಕ್ಷೆಯಲ್ಲಿ ಬೈಡನ್‌ ಅವರು ಟ್ರಂಪ್‌ಗಿಂತ 2 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿರುವುದು ವರದಿಯಾಗಿತ್ತು. 

ಹ್ಯಾರಿಸ್‌ ಅವರು ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಶೇಕಡ 56ರಷ್ಟು ನೋಂದಾಯಿತ ಮತದಾರರು ಒಪ್ಪಿಕೊಂಡಿದ್ದಾರೆ. ಈ ಕ್ಷಮತೆ ಟ್ರಂಪ್ ಅವರಿಗೆ ಇರುವುದಾಗಿ ಶೇಕಡ 49ರಷ್ಟು ಮತದಾರರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT