ಶ್ರೀನಗರ/ನವದೆಹಲಿ: ವಿದ್ಯುತ್ ಕೊರತೆ, ಹಣದುಬ್ಬರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಹಲವು ಪ್ರದೇಶಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಪ್ರತಿಭಟನೆಗಳನ್ನು ಹತ್ತಿಕ್ಕಲು ಅಧಿಕಾರಿಗಳು ಭಾರಿ ದಮನಕಾರಿ ನೀತಿ ಅನುಸರಿಸುತ್ತಿದ್ದಾರೆ. ಶನಿವಾರ ನಡೆದ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 90 ಮಂದಿ ಗಾಯಗೊಂಡಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಮುಜಫರಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ಪ್ರತಿಭಟನಾಕಾರರು,ಪೊಲೀಸರು ಮತ್ತು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿ, ಸ್ವಾತಂತ್ರ್ಯದ ಘೋಷಣೆಗಳನ್ನು ಕೂಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಪ್ರತಿಭಟನೆಯ ನೇತೃತ್ವ ವಹಿಸಿದೆ. 2023ರ ಆಗಸ್ಟ್ನಲ್ಲಿಯೂ ಈ ಸಮಿತಿ ಇದೇ ರೀತಿಯ ಪ್ರತಿಭಟನೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.