ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು ಖಚಿತವಾದ ಬೆನ್ನಲ್ಲೇ ಹಾಲಿ ಉಪಾಧ್ಯಕ್ಷೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಚುನಾವಣೆಯ ಫಲಿತಾಂಶವನ್ನು ಒಪ್ಪಿಕೊಳ್ಳುವಂತೆ ತಮ್ಮ ಬೆಂಬಲಿಗರನ್ನು ಕೇಳಿಕೊಂಡಿದ್ದಾರೆ. ‘ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುತ್ತೇನೆ’ ಎಂದು ಪ್ರತಿಜ್ಞೆ ಮಾಡಿದ್ದಾರೆ.

ತಾವು ಕಲಿತ ಹಾವರ್ಡ್ ವಿಶ್ವವಿದ್ಯಾಲಯದಲ್ಲಿ ಬುಧವಾರ ಭಾವುಕವಾಗಿ ಭಾಷಣ ಮಾಡಿದ 60 ವರ್ಷದ ಕಮಲಾ, ‘ನಾನು ಈ ಚುನಾವಣೆಯಲ್ಲಿ ಸೋಲು ಒಪ್ಪಿಕೊಂಡಿದ್ದೇನೆ. ಆದರೆ ನನ್ನ ಪ್ರಚಾರ ಅಭಿಯಾನವನ್ನು ಉತ್ತೇಜಿಸಿರುವ ಹೋರಾಟವನ್ನು ಮುಂದುವರಿಸುತ್ತೇನೆ’ ಎಂದು ಹೇಳಿದರು.

ದೇಶದ ಮೂಲಭೂತ ತತ್ವಗಳನ್ನು ರಕ್ಷಿಸಲು ನಡೆಸುತ್ತಿರುವ ಹೋರಾಟವನ್ನು ಬಿಟ್ಟುಬಿಡಬೇಡಿ ಎಂದು ಅವರು ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು.

‘ನೀವು ನನ್ನ ಮೇಲೆ ಇಟ್ಟಿರುವ ವಿಶ್ವಾಸ, ನಮ್ಮ ದೇಶದ ಮೇಲೆ ತೋರಿರುವ ಪ್ರೀತಿ ಮತ್ತು ನಿಮ್ಮ ದೃಢನಿಶ್ಚಯದಿಂದಾಗಿ ನನ್ನ ಹೃದಯ ತುಂಬಿದೆ’ ಎಂದ ಅವರು ತಮ್ಮ ಬೆಂಬಲಿಗರ ಉತ್ಸಾಹವನ್ನು ಹೆಚ್ಚಿಸುವ ಪ್ರಯತ್ನ ಮಾಡಿದರು.

‘ನಾವು ಬಯಸಿದ್ದ ಫಲಿತಾಂಶ ಈ ಚುನಾವಣೆಯಲ್ಲಿ ಬಂದಿಲ್ಲ. ನಾವು ಯಾವ ಉದ್ದೇಶಕ್ಕಾಗಿ ಹೋರಾಟ ನಡೆಸಿದ್ದೇವೋ ಅದು ಗುರಿ ತಲುಪಲಿಲ್ಲ. ಆದರೆ, ನಾನು ಹೇಳುವುದನ್ನು ಕೇಳಿ. ಅಮೆರಿಕದ ಭರವಸೆಯ ಬೆಳಕು ಯಾವಾಗಲೂ ಪ್ರಕಾಶಮಾನವಾಗಿ ಉರಿಯುತ್ತಲೇ ಇರುತ್ತದೆ’ ಎಂದರು.

‘ಜನರು ಈಗ ಹಲವು ರೀತಿಯ ಭಾವನೆಗಳನ್ನು ಅನುಭವಿಸುತ್ತಿದ್ದಾರೆ ಎಂಬುದು ತಿಳಿದಿದೆ. ನಿಮ್ಮ ಭಾವನೆಗಳು ನನಗೆ ಅರ್ಥವಾಗುತ್ತಿದೆ. ಏನೇ ಆಗಲಿ, ಈ ಚುನಾವಣೆಯ ಫಲಿತಾಂಶವನ್ನು ನಾವು ಒಪ್ಪಿಕೊಳ್ಳಲೇಬೇಕು. ಚುನಾವಣಾ ಫಲಿತಾಂಶ ಒಪ್ಪಿಕೊಳ್ಳುವುದು ಪ್ರಜಾಪ್ರಭುತ್ವದ ಮೂಲಭೂತ ತತ್ವವಾಗಿದೆ’ ಎಂದು ಹೇಳಿದರು.

ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯಲು ಬೇಕಾದ ಎಲ್ಲ ಸಹಾಯ ಮಾಡುವುದಾಗಿ ಟ್ರಂಪ್ ಹಾಗೂ ಅವರ ತಂಡಕ್ಕೆ ಮಾತುಕೊಟ್ಟಿದ್ದೇನೆ
ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷೆ

ಚುನಾವಣೆ ವೇಳೆ ಎದುರಾದ ಅಸಾಧಾರಣ ಸನ್ನಿವೇಶದಲ್ಲಿ ಐತಿಹಾಸಿಕ ಆಭಿಯಾನ ಮುನ್ನಡೆಸಿದ್ದಕ್ಕಾಗಿ ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸುತ್ತೇನೆ
ಜೋ ಬೈಡನ್ ಅಮೆರಿಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.