ಚಂಡೀಗಢ: ಪಾಕಿಸ್ತಾನದ ನಿಯೋಜಿತ ಪ್ರಧಾನಮಂತ್ರಿ ಇಮ್ರಾನ್ ಖಾನ್ ತಮ್ಮ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿ ಹಿರಿಯ ಕ್ರಿಕೆಟಿಗ ಮತ್ತು ಪಂಜಾಬ್ನ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ಕರೆ ಮಾಡಿದ್ದಾರೆ. ಇದನ್ನು ಸಿಧು ಅವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಇದೇ ತಿಂಗಳ 18ರಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿರುವ ಸಿಧು ಈ ವಿಷಯವನ್ನು ಕೇಂದ್ರ ಗೃಹ ಇಲಾಖೆ ಮತ್ತು ಪಂಜಾಬ್ ಮುಖ್ಯಮಂತ್ರಿ ಕಚೇರಿಯ ಗಮನಕ್ಕೆ ತಂದಿದ್ದಾರೆ.

‘ಇಮ್ರಾನ್ ಖಾನ್ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಸುಧಾರಿಸುವ ಭರವಸೆ ಇದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.