ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆ ಪ್ರಮಾಣ

Published 11 ಜುಲೈ 2024, 15:34 IST
Last Updated 11 ಜುಲೈ 2024, 15:34 IST
ಅಕ್ಷರ ಗಾತ್ರ

ಲಾಹೋರ್‌: ನ್ಯಾಯಮೂರ್ತಿ ಆಲಿಯಾ ನೀಲಂ ಅವರು ಗುರುವಾರ ಪಾಕಿಸ್ತಾನದ ಲಾಹೋರ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಇವರು ನ್ಯಾಯಾಲಯದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಪಾಕಿಸ್ತಾನದ ಮೊದಲ ಮಹಿಳೆ ಎನಿಸಿಕೊಂಡಿದ್ದಾರೆ. 

ಪಂಜಾಬ್‌ ಗವರ್ನರ್‌ ಸರ್ದಾರ್‌ ಸಲೀಂ ಹೈದರ್‌ ಖಾನ್‌ ಅವರು ಆಲಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ಮರ್ಯಾಮ್‌ ನವಾಜ್‌ ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ನವೆಂಬರ್‌ 12, 1966ರಂದು ಜನಸಿರುವ ನೀಲಂ ಅವರು ಪಂಜಾಬ್‌ ವಿಶ್ವವಿದ್ಯಾಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದು ಬಳಿಕ 1996ರಲ್ಲಿ ವಕೀಲರಾಗಿ ವೃತ್ತಿ ಪ್ರಾರಂಭಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT