ನವದೆಹಲಿ: ಟೊರಾಂಟೊ ಬಳಿಯ ಬ್ರಾಮ್ಟನ್ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಾಲಿಸ್ತಾನ ಪ್ರತ್ಯೇಕತಾವಾದಿಗಳು ನಡೆಸಿದ ಇಂಥ ದಾಳಿಗಳಿಂದ ಕೆನಡಾ ಸರ್ಕಾರವು ತನ್ನ ಪ್ರಜೆಗಳನ್ನು ರಕ್ಷಿಸಬೇಕು ಎಂದು ಭಾರತ ಆಗ್ರಹಿಸಿದೆ.

ಭಾರತ ಹೊರತುಪಡಿಸಿದರೆ ಜಗತ್ತಿನಲ್ಲಿ ಸಿಖ್ಖರು ಹೆಚ್ಚಿನ ಸಂಖ್ಯೆಯಲ್ಲಿರುವ 2ನೇ ರಾಷ್ಟ್ರವೇ ಕೆನಡಾ. ಭಾರತದಲ್ಲಿ ಧರ್ಮಾಧಾರಿತ ಪ್ರತ್ಯೇಕ ರಾಜ್ಯದ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿರುವ ಖಾಲಿಸ್ತಾನ ಹೋರಾಟಗಾರರೂ ಕೆನಡಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 2023ರಲ್ಲಿ ಖಾಲಿಸ್ತಾನ ಪರ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಬಾಂಧವ್ಯ ಹದಗೆಟ್ಟಿತ್ತು. ಇದಾದ ನಂತರ ದೇವಸ್ಥಾನದಲ್ಲಿ ನಡೆದ ದಾಳಿಯ ಪ್ರಕರಣ ಉಭಯ ರಾಷ್ಟ್ರಗಳ ನಡುವಿನ ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.

‘ಇಂಥ ಘಟನೆಗಳು ಸ್ವೀಕಾರ್ಹವಲ್ಲ’ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಕಟುವಾಗಿ ಟೀಕಿಸಿದ್ದಾರೆ. ಇದರ ಬೆನ್ನಲ್ಲೇ ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಪತ್ರ ಬರೆದು, ಭಾರತ ನಾಗರಿಕರ ಸುರಕ್ಷತೆ ಮತ್ತು ಧಾರ್ಮಿಕ ಸ್ಥಳದಲ್ಲಿನ ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಇಂಥ ದಾಳಿಗಳು ನಡೆಯದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳನ್ನೂ ಕೆನಡಾ ಸರ್ಕಾರ ರಕ್ಷಿಸಬೇಕು. ದಾಳಿಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕೆನಡಾದಲ್ಲಿರುವ ಭಾರತೀಯ ನಾಗರಿಕರ ಭದ್ರತೆ ಹಾಗೂ ಸುರಕ್ಷತೆ ಕುರಿತು ಭಾರತ ತೀವ್ರ ಕಳವಳ ಹೊಂದಿದೆ’ ಎಂದಿದ್ದಾರೆ.

ಘಟನೆ ಕುರಿತ ವಿಡಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಾಲಿಸ್ತಾನ ಹೋರಾಟಗಾರರ ಹಳದಿ ಬಣ್ಣದ ಧ್ವಜ ಹಿಡಿದ ಗುಂಪೊಂದು ದೇವಾಲಯದ ಒಳಗೆ ನುಗ್ಗಿ, ಮತ್ತೊಂದು ಗುಂಪಿನೊಂದಿಗೆ ಕಾದಾಟ ನಡೆಸಿತು. ಭಾರತದ ರಾಷ್ಟ್ರ ಧ್ವಜ ಹಿಡಿದವರ ಮೇಲೂ ಈ ಗುಂಪು ಹಲ್ಲೆ ನಡೆಸಿದೆ.

2023ರ ಜೂನ್ನಲ್ಲಿ ಕೆನಡಾದಲ್ಲಿ ನಡೆದಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಪಾತ್ರದ ಬಗ್ಗೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಪ್ರಧಾನಿ ಟ್ರುಡೊ ವರ್ಷದ ಹಿಂದೆ ಹೇಳಿದ್ದರು.

ಏತನ್ಮಧ್ಯೆ, ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಸಂಚಿನಲ್ಲಿ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್ ಮಾರಿಸನ್ ಇತ್ತೀಚೆಗೆ ಆರೋಪಿಸಿದ್ದಾರೆ.

ಇವುಗಳ ಪರಿಣಾಮವಾಗಿ ರಾಜತಾಂತ್ರಿಕ ಸಂಬಂಧ ಜಟಿಲಗೊಂಡಿರುವುದರ ನಡುವೆ, ಕೆನಡಾ ಸರ್ಕಾರವು ಸೈಬರ್ ಬೆದರಿಕೆಯೊಡ್ಡುವ ವಿರೋಧಿ ರಾಷ್ಟ್ರಗಳ ಪಟ್ಟಿಗೆ ಭಾರತವನ್ನು ಕಳೆದ ವಾರ ಸೇರಿಸಿದೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.