ಕಠ್ಮಂಡು: ಆರೋಗ್ಯ ಮತ್ತು ಶೈಕ್ಷಣಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಸ್ಥೆಗಳಿಗೆ ಭಾರತವು 84 ವಾಹನಗಳನ್ನು ಉಡುಗೊರೆಯಗಿ ನೀಡಿದೆ ಎಂದು ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿದೆ.

34 ಅಂಬುಲೆನ್ಸ್ ಮತ್ತು 50 ಶಾಲಾ ಬಸ್‌ಗಳ ಕೀಗಳನ್ನು ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ ಅವರು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಅಶೋಕ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಸಂಸ್ಥೆಗಳಿಗೆ ಹಸ್ತಾಂತರಿಸಿದರು. ಈ ಬಗ್ಗೆ ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ ಟ್ವಿಟರ್‌ನಲ್ಲಿ ಫೋಟೊಗಳನ್ನು ಹಂಚಿಕೊಂಡಿದೆ.

ನೇಪಾಳದ ಆರೋಗ್ಯ ಮತ್ತು ಶಿಕ್ಷಣ ವಲಯಗಳನ್ನು ಅಭಿವೃದ್ಧಿಗೊಳಿಸಲು ನೇಪಾಳ–ಭಾರತ ಅಭಿವೃದ್ಧಿ ಪಾಲುದಾರಿಕೆ ಕಾರ್ಯಕ್ರಮದ ಅಡಿಯಲ್ಲಿ ವಾಹನಗಳನ್ನು ಉಡುಗೊರೆಯಾಗಿ ನೀಡುವುದು ಬಹುಕಾಲದ ಸಂಪ್ರದಾಯವಾಗಿದೆ ಎಂದು ಶ್ರೀವಾಸ್ತವ್ ಹೇಳಿದ್ದಾರೆ.

1994ರಿಂದ ಈವರೆಗೆ 974 ಅಂಬುಲೆನ್ಸ್ ಮತ್ತು 234 ಬಸ್‌ಗಳನ್ನು ಭಾರತವು ನೇಪಾಳದ ವಿವಿಧ ಸಂಸ್ಥೆಗಳಿಗೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.