ವಾಷಿಂಗ್ಟನ್: ಭಾರತ ಹೂಡಿಕೆ ಮಾಡಲು ಅತ್ಯಂತ ಪ್ರಶಸ್ತವಾದ ತಾಣವಾಗಿದೆ ಎಂದು ಅಮೆರಿಕ ಸರ್ಕಾರದ ವಿಶೇಷ ಅಧಿಕಾರಿ ಜಾನ್ ಕೆರ್ರಿ ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹವಾಮಾನ ಬದಲಾವಣೆಯಿಂದ ಎದುರಾಗುವ ಸವಾಲುಗಳ ಕುರಿತು ಅರಿವು ಹೊಂದಿದ್ದು, ಅವರೊಂದಿಗೆ ಕೆಲಸ ಮಾಡಲು ನಾವು ಉತ್ಸುಕವಾಗಿದ್ದೇವೆ ಎಂದು ಹೇಳಿದ್ದಾರೆ.

ಜೋ ಬೈಡನ್ ಸರ್ಕಾರದಲ್ಲಿ ಹವಾಮಾನ ಕುರಿತ ವಿಚಾರಗಳ ವಿಶೇಷ ಅಧಿಕಾರಿಯಾಗಿರುವ ಜಾನ್ ಕೆರ್ರಿ, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಜತೆಗೆ ಕೆಲಸ ಮಾಡಲು ಇಚ್ಛಿಸುತ್ತೇವೆ, ಈಗಾಗಲೇ ನಾವು ಹಲವು ವಿಚಾರಗಳಲ್ಲಿ ಜತೆಯಾಗಿ ಕೆಲಸ ಮಾಡಿದ್ದೇವೆ. ಉಭಯ ರಾಷ್ಟ್ರಗಳು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೆಲಸ ಮಾಡಲಿವೆ ಎಂದು ತಿಳಿಸಿದ್ದಾರೆ.

ಅಮೆರಿಕ ರಾಷ್ಟ್ರೀಯ ಭದ್ರತಾ ಸಮಿತಿಯ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗ 2021ರಲ್ಲಿ ಭಾಗವಹಿಸಿ ಮಾತನಾಡಿದ ಕೆರ್ರಿ, ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲು ಬಯಸುವುದಾಗಿ ತಿಳಿಸಿದ್ದಾರೆ. ನವೀಕರಿಸಬಲ್ಲ ಇಂಧನ ಬಳಕೆ ಮತ್ತು ಉತ್ತೇಜನದಲ್ಲಿ ಭಾರತದ ಕಾರ್ಯ ಶ್ಲಾಘನೀಯವಾಗಿದೆ. ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ರಾಷ್ಟ್ರಗಳಿಗೆ ಇದು ಅತ್ಯಂತ ಸೂಕ್ತವಾಗಿದೆ ಎಂದು ಜಾನ್ ಕೆರ್ರಿ ಭಾರತವನ್ನು ಉದಾಹರಿಸಿ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.