ವಾಷಿಂಗ್ಟನ್: ಅಮೆರಿಕದ ವಿಶ್ವವಿದ್ಯಾಲಯಗಳ ಜತೆ ಸಹಭಾಗಿತ್ವ ಹೊಂದುವ ನಿಟ್ಟಿನಲ್ಲಿ ಭಾರತ ಪ್ರಯತ್ನ ಆರಂಭಿಸಿದೆ.

ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳ ಅಧ್ಯಯನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತದ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳುತ್ತಾರೆ. ಹೀಗಾಗಿ, ಅಮೆರಿಕದ ವಿಶ್ವವಿದ್ಯಾಲಯಗಳನ್ನು ‘ಜ್ಞಾನದ ಸಹಭಾಗಿತ್ವ’ ಯೋಜನೆಯಲ್ಲಿ ಸೇರಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಅಮೆರಿಕದಲ್ಲಿರುವ ಭಾರತದ ರಾಯಭಾರಿ ತಾರಾಂಜಿತ್ ಸಿಂಗ್ ಸಂಧು ಅವರು ಈಗಾಗಲೇ ಅಮೆರಿಕದ ವಿಶ್ವವಿದ್ಯಾಲಯಗಳ ಜತೆ ಸಮಾಲೋಚನೆ ನಡೆಸಿದ್ದಾರೆ.

‘ಅಮೆರಿಕದಲ್ಲಿ ಭಾರತದ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳಿದ್ದಾರೆ. ಇವರೆಲ್ಲರೂ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳ ಅಧ್ಯಯನದಲ್ಲಿ ತೊಡಗಿದ್ದಾರೆ. ಹೀಗಾಗಿ, ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ವಿಪುಲ ಅವಕಾಶಗಳಿವೆ’ ಎಂದು ಸಂಧು ಅವರು ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ವಿನಿಮಯ, ಆನ್ಲೈನ್ ಶಿಕ್ಷಣ, ವಿಶ್ವವಿದ್ಯಾಲಯಗಳ ನಡುವೆ ಒಪ್ಪಂದ ಮುಂತಾದ ಕ್ರಮಗಳನ್ನು ಕೈಗೊಳ್ಳಬಹುದು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಅರಿಜೊನಾ ಸ್ಟೇಟ್ ಯುನಿವರ್ಸಿಟಿ’ ಮತ್ತು ‘ಹಾವರ್ಡ್ ಯುನಿವರ್ಸಿಟಿ’ ಅಧಿಕಾರಿಗಳ ಜತೆ ಭಾರತದ ಹಿರಿಯ ರಾಜತಾಂತ್ರಿಕರು ಈ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಮಿಲಿಟರಿ ವಲಯದಲ್ಲಿ ಅಮೆರಿಕ–ಭಾರತ ಸಂಬಂಧ ಬಲಿಷ್ಠ: ಆಶ್ ಕಾರ್ಟರ್ ಅಭಿಮತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.