ಲಂಡನ್: ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ (ಎಸ್‌ಯು) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಯಿತು.

ಅನ್ವಿ ಭೂತಾನಿ ಅವರು ಆಕ್ಸ್‌ಫರ್ಡ್ ಎಸ್‌ಯುನ ಜನಾಂಗೀತ ಜಾಗೃತಿ ಮತ್ತು ಸಮಾನತೆ ಅಭಿಯಾನದ (ಸಿಆರ್‌ಎಇ) ಸಹ ಅಧ್ಯಕ್ಷೆ ಮತ್ತು ಆಕ್ಸ್‌ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷರು ಕೂಡ ಆಗಿದ್ದಾರೆ.

ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾಮಂತ್ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಉಪಚುನಾವಣೆಯು ನಡೆದಿದೆ.

‘2021–22ರ ಸಾಲಿನ ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ ಉಪಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನವು ನಡೆದಿದೆ. ಈ ಬಾರಿ 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ. ಅಲ್ಲದೆ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಳಿದಿದ್ದರು. ಇದು ಈವರೆಗೆ ಈ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿಗಳ ಸಂಖ್ಯೆಯಲ್ಲೇ ಅತಿ ಹೆಚ್ಚು ಆಗಿದೆ’ ಎಂದು ವಿದ್ಯಾರ್ಥಿ ಪತ್ರಿಕೆ ‘ಚೆರ್ವೆಲ್’ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.