ಒಟ್ಟಾವ: ಕೆನಡಾದ ಅಲ್ಬೆರ್ಟಾ ಪ್ರಾಂತ್ಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ನಿರ್ಮಾಣ ಉದ್ಯಮಿ ಸೇರಿ ಇಬ್ಬರು ಮೃತಪಟ್ಟಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅಲ್ಬೆರ್ಟಾ ಪ್ರಾಂತ್ಯದ ಸಮೀಪದ ಕ್ಯವನಾಹ್‌ನ ವಸತಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಪೊಲೀಸರು ಇದಕ್ಕೆ ಪ್ರತ್ಯುತ್ತರ ನೀಡಿದ್ದಾರೆ ಎಂದು ಸಿಬಿಸಿ ಸುದ್ದಿ ವಾಹಿನಿ ವರದಿ ಮಾಡಿದೆ.
.ಕೆನಡಾ: ಮಗನಿಂದಲೇ ಭಾರತ ಮೂಲದ ವ್ಯಕ್ತಿಯ ಕೊಲೆ.
49 ಹಾಗೂ 57 ವರ್ಷದ ಇಬ್ಬರು ಮೃತಪಟ್ಟಿದ್ದು, 51 ವರ್ಷದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಮಂಗಳವಾರ ಹಾಗೂ ಬುಧವಾರ ನಿಗದಿಯಾಗಿದೆ ಎಂದು ವರದಿ ತಿಳಿಸಿದೆ.

ಮೃತಟಟ್ಟ ವ್ಯಕ್ತಿಯನ್ನು ಬೂಟಾ ಸಿಂಗ್ ಗಿಲ್ ಎಂದು ಗುರುತಿಸಲಾಗಿದ್ದು, ನಿರ್ಮಾಣ ಕಂಪನಿಯೊಂದರ ಮಾಲೀಕರಾಗಿದ್ದಾರೆ. ಪಂಜಾಬಿ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
.ಶೈಕ್ಷಣಿಕ ವೀಸಾಗೆ ಮಿತಿ ಹೇರಿದ ಕೆನಡಾ: ಭಾರತೀಯ ವಿದ್ಯಾರ್ಥಿಗಳ ಮೇಲೆ ಪರಿಣಾಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.