ನ್ಯೂಯಾರ್ಕ್: ಭಾರತೀಯ ಮೂಲದ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ಅಮೆರಿಕದ ನ್ಯೂಜೆರ್ಸಿಯಲ್ಲಿನ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತೇಜ್ ಪ್ರತಾಪ್ ಸಿಂಗ್ (43), ಸೋನಲ್ ಪರಿಹಾರ್ (42) ಹಾಗೂ ಅವರ ಹತ್ತು ಮತ್ತು ಆರು ವರ್ಷದ ಇಬ್ಬರು ಮಕ್ಕಳು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪ್ಲೈನ್ಸ್ಬೊರೊ ಪೊಲೀಸ್ ಇಲಾಖೆ ತಿಳಿಸಿದೆ.

‘ಅ.4 ರಂದು ಸಂಬಂಧಿಕರು ಪೊಲೀಸ್ ಠಾಣೆಗೆ ಕರೆ ಮಾಡಿ, ಪ್ಲೈನ್ಸ್ಬೊರೊದಲ್ಲಿ ನೆಲಸಿರುವ ಸಿಂಗ್ ಕುಟುಂಬದ ಯೋಗಕ್ಷೇಮದ ಕುರಿತು ಮಾಹಿತಿ ನೀಡುವಂತೆ ಕೇಳಿಕೊಂಡಿದ್ದರು. ಅಧಿಕಾರಿಗಳು ಮನೆಗೆ ತೆರಳಿ ಪರಿಶೀಲಿಸಿದಾಗ ದುರಂತ ಬಯಲಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

‘ಪ್ರಕರಣದ ತನಿಖೆ ನಡೆಯುತ್ತಿದೆ. ಮೃತದೇಹಗಳ ಪರೀಕ್ಷೆ ನಡೆಸಲಾಗಿದೆ’ ಎಂದು ತಿಳಿಸಿದೆ.

ಸಿಂಗ್ ಮತ್ತು ಪರಿಹಾರ್ ಇಬ್ಬರೂ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕೆಲಸ ಮಾಡುತ್ತಿದ್ದು, 2018ರ ಆಗಸ್ಟ್ನಲ್ಲಿ ₹5.28 ಕೋಟಿ ನೀಡಿ ಮನೆ ಖರೀದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.