ಒಟ್ಟಾವಾ (ಕೆನಡಾ): ಕೆನಡಾದ ಒಂಟಾರಿಯೊ ಪ್ರಾಂತ್ಯದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಭಾರತ ಮೂಲದ ದಂಪತಿ ಹಾಗೂ ಅವರ ಪುತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಮಾರ್ಚ್ 7 ರಂದು ಬ್ರಾಂಪ್ಟನ್‌ನ ಬಿಗ್ ಸ್ಕೈ ವೇ ಮತ್ತು ವ್ಯಾನ್ ಕಿರ್ಕ್ ಡ್ರೈವ್ ಪ್ರದೇಶದಲ್ಲಿನ ಬೆಂಕಿ ಕಾಣಿಸಿಕೊಂಡಿತ್ತು. ಮೂವರ ಮೃತದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಿಕ್ಕಿದ್ದವು.

ಮೃತರನ್ನು ರಾಜೀವ್ ವಾರಿಕೂ (51), ಶಿಲ್ಪಾ ಕೋಥಾ (47) ಮತ್ತು ಮಾಹೆಕ್ ವಾರಿಕೂ (16) ಎಂದು ಗುರುತಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ಇವರು ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.