ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ನಾಲ್ಕು ಬಾರಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಇರುವ ಮುಹಮ್ಮದ್ ಇಶಾಖ್ ದರ್ ಅವರಿಗೆ ವಿದೇಶಾಂಗ ಖಾತೆ ನೀಡಲಾಗಿದೆ.

ಭಾರತ, ಅಫ್ಗಾನಿಸ್ತಾನ ಸೇರಿದಂತೆ ನೆರೆಯ ದೇಶಗಳೊಂದಿಗೆ ಹಲವು ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವ ಸ್ಥಾನವು ಮಹತ್ವದ್ದಾಗಿದೆ. ಇಂಥ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳಲ್ಲಿ ಕಡಿಮೆ ಅನುಭವ ಹೊಂದಿರುವ ದರ್ ಅವರಿಗೆ ಪ್ರಮುಖ ಖಾತೆ ನೀಡಲಾಗಿದೆ.

ಕಾಶ್ಮೀರಿ ಜನಾಂಗದ ದರ್ ಅವರು ವೃತ್ತಿಯಿಂದ ಚಾರ್ಟಡ್ ಅಕೌಂಟೆಂಟ್ ಆಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್–ನವಾಜ್ (ಪಿಎಂಎಲ್–ಎನ್) ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಜತೆಗೆ ಪಕ್ಷದ ವರಿಷ್ಠ ನವಾಜ್ ಷರೀಫ್ ಅವರ ನಂಬಿಕಸ್ಥ ಬೆಂಬಲಿಗರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.