ಜೆರುಸಲೇಂ: ಇಸ್ರೇಲ್‌ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕೋವಿಡ್ ನಿರ್ಬಂಧಗಳನ್ನು ಮಂಗಳವಾರ ಸಡಿಲಗೊಳಿಸಿದೆ.

ರೆಸ್ಟೋರೆಂಟ್ ಮತ್ತು ಮನರಂಜನಾ ಸ್ಥಳಗಳಲ್ಲಿ ಲಸಿಕೆ ಪ್ರಮಾಣ ಪತ್ರ ಕಡ್ಡಾಯವಾಗಿತ್ತು. ಇದೀಗ ಈ ನಿಯಮವನ್ನು ತೆಗೆದು ಹಾಕಲಾಗಿದ್ದು, ವ್ಯವಹಾರಗಳಲ್ಲಿ ಜನರ ಪಾಲ್ಗೊಳ್ಳುವಿಕೆ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಕೂಡ ತೆರವುಗೊಳಿಸಲಾಗಿದೆ.

‘ಪ್ರಸ್ತುತ ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಈ ನಿಯಮವನ್ನು ಅಂತ್ಯಗೊಳಿಸುವ ಬಗ್ಗೆ ಮುಂದಿನ ಎರಡು ವಾರಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಇಸ್ರೇಲ್ ಆರೋಗ್ಯ ಸಚಿವ ಯುಲಿ ಎಡೆಲ್‌ಸ್ಟೇನ್ ಅವರು ತಿಳಿಸಿದರು.

‘ವಿದೇಶಿ ಪ್ರಯಾಣಿಕರ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರಿಸಲಾಗಿದೆ. ಆದರೆ ಇಸ್ರೇಲ್ ನಾಗರಿಕರ ಹತ್ತಿರದ ಸಂಬಂಧಿಕರು, ತಜ್ಞರು ಮತ್ತು ಕೆಲವು ಪ್ರವಾಸಿಗರಿಗೆ ವಿನಾಯಿತಿ ನೀಡಲಾಗಿದೆ’ ಎಂದು ಅವರು ಹೇಳಿದರು.

ಇಸ್ರೇಲ್‌ನಲ್ಲಿ ಮಂಗಳವಾರ ಕೇವಲ ನಾಲ್ಕು ಹೊಸ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು 350 ಪ್ರಕರಣಗಳಿವೆ. ಈ ಬದಲಾವಣೆಗೆ ಲಸಿಕೆ ಅಭಿಯಾನವೇ ಕಾರಣ ಎನ್ನಲಾಗಿದೆ.

ಫೈಜರ್/ಬಯೊಎನ್‌ಟೆಕ್ ಲಸಿಕೆಯಿಂದ ಈ ಮಹತ್ತರದ ಬದಲಾವಣೆ ಸಾಧ್ಯವಾಯಿತು. ಇಸ್ರೇಲ್‌ನಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟ ಶೇಕಡ 90 ರಷ್ಟು ಜನರಿಗೆ ಲಸಿಕೆಯನ್ನು ನೀಡಲಾಗಿದೆ. ಆದರೆ 18 ವರ್ಷಕ್ಕಿಂತ ಕೆಳಗಿನವರಿಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಲು ಬಾಕಿಯಿರುವುದರಿಂದ ಶಾಲೆಗಳಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ.

ಕಳೆದ ಕೆಲ ವಾರಗಳಿಂದ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪ್ಯಾಲೆಸ್ಟೀನಿಯರಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

‘ಮಿಶ್ರ ಲಸಿಕೆ‘ ಹಾಕಿಸುವತ್ತ ಹಲವು ದೇಶಗಳ ಚಿತ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.