ರಿಯಾದ್: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಸಂಘರ್ಷ ಕುರಿತು ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಇಂದು (ಶುಕ್ರವಾರ) ಪ್ರತಿಕ್ರಿಯಿಸಿದ್ದಾರೆ.

ಗಲ್ಫ್ ಸಹಕಾರ ಮಂಡಳಿಯ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಸಂಘರ್ಷ ಕುರಿತು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಈಚೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು.

ದೊರೆ ಮೊಹಮ್ಮದ್ ಅವರಿಗೆ ಕರೆ ಮಾಡಿದ ರೈಸಿ, ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ರಸ್ತುತ ಮಿಲಿಟಿರಿ ಪರಿಸ್ಥಿತಿ ಕುರಿತು ಚರ್ಚಿಸಿದ್ದರು.

ಸಂಘರ್ಷ ನಿಲ್ಲಿಸುವ ಕುರಿತು ರಿಯಾದ್ ಎಲ್ಲಾ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಸಂವಹನ ನಡೆಸುತ್ತಿದೆ ಎಂದು ಮೊಹಮ್ಮದ್ ಅವರು ರೈಸಿಗೆ ತಿಳಿಸಿದರು ಎಂದು ಸೌದಿ ಪ್ರೆಸ್ ಏಜೆನ್ಸಿ (ಎಸ್ಪಿಎ) ಅಧಿಕಾರಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.