ಜೆರುಸಲೇಂ:ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಏಪ್ರಿಲ್ 2ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರ ನಾಲ್ಕು ದಿನಗಳ ಭಾರತ ಪ್ರವಾಸ ಇದಾಗಿದೆ.

ಇಸ್ರೇಲ್ ಮತ್ತು ಭಾರತದ ನಡುವೆ ಪೂರ್ಣ ಪ್ರಮಾಣದಲ್ಲಿ ರಾಜತಾಂತ್ರಿಕ ಸಂಬಂಧಗಳು ಆರಂಭವಾಗಿ 30 ವರ್ಷಗಳು ಸಂದಿರುವ ಸಂದರ್ಭದಲ್ಲಿ ಈ ಭೇಟಿ ನಿಗದಿಯಾಗಿದೆ.

ಕಳೆದ ಜೂನ್ನಲ್ಲಿ ಪ್ರಧಾನಿಯಾಗಿ ಬೆನೆಟ್ ಅಧಿಕಾರ ಸ್ವೀಕರಿಸಿದ್ದಾರೆ. ಅವರ ಮೊದಲ ಭಾರತದ ಭೇಟಿ ಇದಾಗಿದೆ. ಈ ವೇಳೆ ತಂತ್ರಜ್ಞಾನ,ನವೀನತೆ, ಭದ್ರತೆ, ಸೈಬರ್, ಕೃಷಿ ಮತ್ತು ಹವಾಮಾನ ಬದಲಾವಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳ ಸಹಕಾರ ವಿಸ್ತರಿಸುವ ಗುರಿಯನ್ನು ಅವರು ಹೊಂದಿದ್ದಾರೆ.

‘ನನ್ನ ಗೆಳೆಯ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಭಾರತಕ್ಕೆ ನನ್ನ ಮೊದಲ ಅಧಿಕೃತ ಭೇಟಿ ನೀಡಲು ಉತ್ಸುಕನಾಗಿದ್ದೇನೆ. ಉಭಯ ದೇಶಗಳ ಸಂಬಂಧ ಉತ್ತಮ ಹಾದಿಯಲ್ಲಿ ಸಾಗುವಂತೆ ನಾವಿಬ್ಬರು ಕಾರ್ಯ ನಿರ್ವಹಿಸಲಿದ್ದೇವೆ’ ಎಂದು ಬೆನೆಟ್ ಹೇಳಿದ್ದಾರೆ.

ಇದನ್ನೂ ಓದಿ– ಓಮೈಕ್ರಾನ್ ತಳಿ ಬಿಎ.2: ಚೀನಾ, ಫ್ರಾನ್ಸ್, ಜರ್ಮನಿಯಲ್ಲಿ ಕೋವಿಡ್ ಪ್ರಕರಣ ಏರಿಕೆ

‘ಮೋದಿ ಅವರು ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧವನ್ನು ಪುನರಾರಂಭಿಸಿದ್ದಾರೆ. ಇದು ಐತಿಹಾಸಿಕ ಪ್ರಾಮುಖ್ಯತೆ ಹೊಂದಿದೆ. ಭಾರತೀಯ ಸಂಸ್ಕೃತಿ ಮತ್ತು ಯಹೂದಿ ಸಂಸ್ಕೃತಿಗಳೆರಡೂ ವಿಶಿಷ್ಟ ಸಂಸ್ಕೃತಿಗಳಾಗಿದ್ದು, ಇವುಗಳ ನಡುವಿನ ಸಂಬಂಧ ಇನ್ನಷ್ಟು ವೃದ್ಧಿಯಾಗಬೇಕಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.