ಜೆರುಸಲೇಂ: ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ವಜಾಗೊಳಿಸಿದ ಬೆನ್ನಲ್ಲೇ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆದಿವೆ.

ಒಂದು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಯುದ್ಧ ನಡೆಯುತ್ತಿದ್ದು ಈ ಸಂದರ್ಭದಲ್ಲಿ ರಕ್ಷಣಾ ಸಚಿವರನ್ನು ವಜಾಗೊಳಿಸಿರುವುದು ಅಚ್ಚರಿಯನ್ನುಂಟು ಮಾಡಿದೆ.

ನೆತನ್ಯಾಹು ಹಾಗೂ ಗ್ಯಾಲಂಟ್ ನಡುವೆ ಗಾಜಾದಲ್ಲಿ ಯುದ್ಧ ಮುಂದುವರಿಸುವ ಬಗ್ಗೆ ಪದೇ ಪದೇ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮೇಲೆ ವಿಶ್ವದ ಗಮನ ಕೇಂದ್ರೀಕೃತವಾಗಿದ್ದ ದಿನವೇ ನೆತನ್ಯಾಹು ಈ ಮಹತ್ವದ ಕ್ರಮ ಕೈಗೊಂಡಿದ್ದಾರೆ.

‘ನಮ್ಮಿಬ್ಬರ ನಡುವೆ ‘ನಂಬಿಕೆ’ ಕಡಿಮೆಯಾಗಿದ್ದು ಹಾಗೂ ಅಂತರ ಹೆಚ್ಚಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಬೆಂಜಮಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಮತ್ತು ರಕ್ಷಣಾ ಸಚಿವರ ನಡುವೆ ಅಚಲ ನಂಬಿಕೆಯಿರಬೇಕು. ಆರಂಭದಲ್ಲಿ ಎಲ್ಲವೂ ಸರಿಯಿತ್ತು. ಆದರೆ ಈಚೆಗೆ ದಿನದಿಂದ ದಿನಕ್ಕೆ ವಿಶ್ವಾಸ ಕಡಿಮೆಯಾಗುತ್ತಿತ್ತು’ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.