ಬೆಂಗಳೂರು:ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿನ್ಯೂಜೆರ್ಸಿಯ ಸೋಮರ್ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿಪೂಜೆಯವಿವಿಧ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಂಡರು.

‘ಆದಿಚುಂಚನಗಿರಿ ಮಹಾಸಂಸ್ಥಾನವು ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ’ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಆದ್ದರಿಂದ ಇಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಸ್ಥಳೀಯ ಕನ್ನಡಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಉಪಸ್ಥಿತರಿದ್ದರು.

ಜುಲೈ 5ರಂದು ಒಕ್ಕಲಿಗರ ಪರಿಷತ್ಅಮೆರಿಕ ಘಟಕ ಆಯೋಜಿಸಿರುವಸಮಾವೇಶದಲ್ಲಿ ಭಾಗವಹಿಸಿದ ನಂತರ ಭಾರತಕ್ಕೆ ಹಿಂದಿರುಗಲಿದ್ದಾರೆ.ಇದು ಸಂಪೂರ್ಣ ಖಾಸಗಿ ಭೇಟಿಯಾಗಿದ್ದು, ಸರ್ಕಾರ ಯಾವುದೇ ವೆಚ್ಚ ಭರಿಸುತ್ತಿಲ್ಲ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.