ವಾಷಿಂಗ್ಟನ್: ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ಇನ್ನಷ್ಟು ಬಲಿಷ್ಠಗೊಳ್ಳಲಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಅಧ್ಯಕ್ಷ ಜೋ ಬೈಡನ್ ಅವರು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಗೌರವಿಸುತ್ತಾರೆ. ಈ ಸಂಬಂಧ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತಾರೆ’ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ ವರದಿಗಾರರಿಗೆ ತಿಳಿಸಿದ್ದಾರೆ.

‘ಭಾರತ ಮೂಲದ ಅಮೆರಿಕನ್ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಮಾಡಿದವರೇ ಬೈಡನ್. ಕಮಲಾ ಹ್ಯಾರಿಸ್ ಅವರು ಬುಧವಾರ ಮೊದಲ ಭಾರತ ಸಂಜಾತ ಅಮೆರಿಕನ್ ಉಪಾಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೊಂದು ಐತಿಹಾಸಿಕ ಕ್ಷಣ. ಹಾಗಾಗಿ ಇದು ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸಲಿದೆ’ ಎಂದು ಜೆನ್ ಅಭಿಪ್ರಾಯಟ್ಟಿದ್ದಾರೆ.

ಇದನ್ನೂ ಓದಿ:ಕಮಲಾ ಹ್ಯಾರಿಸ್, ಮಿಶೆಲ್ ಒಮಾಮ, ಹಿಲರಿ: ನೇರಳೆ ಬಣ್ಣದ ಉಡುಪು ಧರಿಸಿದ್ದೇಕೆ?

ಕಮಲಾ ಹ್ಯಾರಿಸ್ ಅವರು ಅಮೆರಿಕದ ಉಪಾಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಥಮ ಭಾರತ ಸಂಜಾತ ಮಹಿಳೆ ಮಾತ್ರವಲ್ಲದೆ ಪ್ರಥಮ ಕಪ್ಪು ವರ್ಣೀಯ ಮತ್ತು ಆಫ್ರಿಕ ಮೂಲದ ಅಮೆರಿಕದ ಪ್ರಥಮ ಮಹಿಳೆಯೂ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.