ಮಾಸ್ಕೊ: ಉಕ್ರೇನ್ ಮೇಲಿನ ರಷ್ಯಾ ಕಾರ್ಯಾಚರಣೆ 32ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಟೀಕಿಸಿದ್ದಾರೆ. ಬೈಡನ್ ಅವರ ಹೇಳಿಕೆಗೆ ಸೋಮವಾರ ರಷ್ಯಾ ಕಳವಳ ವ್ಯಕ್ತಪಡಿಸಿದೆ.

'ಇದು ನಿಸ್ಸಂಶಯವಾಗಿ ಆತಂಕಕಾರಿ ಹೇಳಿಕೆಯಾಗಿದೆ' ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾಸ್ಕೋ ಅಮೆರಿಕ ಅಧ್ಯಕ್ಷರ ಹೇಳಿಕೆಗಳನ್ನು 'ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತದೆ' ಎಂದು ಹೇಳಿದ್ದಾರೆ.

‘ವ್ಲಾಡಿಮಿರ್ ಪುಟಿನ್ ಒಬ್ಬ ಕಟುಕ. ಆತ ಇನ್ನು ಅಧಿಕಾರದಲ್ಲಿ ಇರಕೂಡದು’ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಟೀಕಿಸಿದ್ದರು. ‘ನ್ಯಾಟೊ ಸದಸ್ಯ ರಾಷ್ಟ್ರಗಳ ಒಂದಿಂಚು ಪ್ರದೇಶವನ್ನು ವಶಪಡಿಸಿಕೊಳ್ಳುವ ಬಗ್ಗೆಯೂ ರಷ್ಯಾ ಯೋಚನೆ ಮಾಡಬಾರದು’ ಎಂದು ಎಚ್ಚರಿಕೆಯನ್ನೂ ನೀಡಿದ್ದರು.

ಪೋಲೆಂಡ್‌ನ ವಾರ್ಸಾ ನಗರದಲ್ಲಿ ಉಕ್ರೇನ್‌ನ ಸಚಿವರೊಂದಿಗೆ ಸಭೆ ನಡೆಸಿದ ನಂತರ ರಾಯಲ್ ಕ್ಯಾಸಲ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಬೈಡನ್, ಪುಟಿನ್ ವಿರುದ್ಧ ಕಟು ಟೀಕೆ ಮಾಡಿದರೆ, ರಷ್ಯಾ ಪ್ರಜೆಗಳ ಕುರಿತು ಅಷ್ಟೇ ಮೃದು ಮಾತುಗಳನ್ನಾಡಿದ್ದರು.

ಫೆ.24 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಸೇನಾ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ಅಂದಿನಿಂದ ರಷ್ಯಾ ಪಡೆಗಳು ಉಕ್ರೇನ್ ಮೇಲೆ ಆಕ್ರಮಣವನ್ನು ಮುಂದುವರಿಸಿದ್ದು, ಯೋಧರು, ನಾಗರಿಕರು ಸೇರಿದಂತೆ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.