ಕೊಲಂಬೊ: ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಮಾರಣಾಂತಿಕ ದಾಳಿ ನಡೆಸಲಾದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸ ಅವರಿಗೆ ವಿಳಂಬವಾಗಿ ಸಮನ್ಸ್ ನೀಡಲು ಶ್ರೀಲಂಕಾ ಮಾನವ ಹಕ್ಕುಗಳ ಆಯೋಗ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ರಾಜಪಕ್ಸ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಲ್ಲಿನ ಪ್ರಜೆಗಳು ಪ್ರತಿಭಟನೆ ನಡೆಸಿದ್ದ ವೇಳೆ, ರಾಜಪಕ್ಸ ಬೆಂಬಲಿಗರು ಪ್ರತಿಭಟನಕಾರರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಇದೇ ಬುಧವಾರರಾಜಪಕ್ಸ ಅವರನ್ನು ವಿಚಾರಣೆಗೆ ಕರೆಯಲು ಮಾನವ ಹಕ್ಕುಗಳ ಆಯೋಗ ನಿರ್ಧರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗವು ಅನೇಕ ಪೊಲೀಸರು ಹಾಗೂ ಜೈಲು ಅಧಿಕಾರಿಗಳಿಂದ ಹೇಳಿಕೆ ಪಡೆದಿದೆ. ಆದರೆ ಇನ್ನೂ ಹಲವು ಪೊಲೀಸರು, ಜೈಲಿನ ಅಧಿಕಾರಿಗಳಿಂದ ಹೇಳಿಕೆಗಳನ್ನು ಪಡೆಯಬೇಕಿರುವುದರಿಂದ ಸದ್ಯದಲ್ಲಿ ರಾಜಪಕ್ಸ ಅವರಿಗೆ ಸಮನ್ಸ್ ನೀಡುತ್ತಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪೊಲೀಸರು, ಅಧಿಕಾರಿಗಳು ಸೇರಿದಂತೆ ದಾಳಿಗೊಳಗಾದ ಸಂತ್ರಸ್ತರಿಂದ ಇನ್ನೂ ಹಲವು ಹೇಳಿಕೆಗಳನ್ನು ಪಡೆದುಕೊಳ್ಳಬೇಕು ಎಂದು ಮಾನವ ಹಕ್ಕುಗಳ ಆಯೋಗ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.