ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಕೆಲವು ದಿನಗಳ ಬಳಿಕ ಮಾಲ್ಡೀವ್ಸ್ ಸಚಿವರೊಬ್ಬರು ಭಾರತವು ಮಾಲ್ಡೀವ್ಸ್ ದೇಶವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಭಾರತವು ಮಾಲ್ಡೀವ್ಸ್ ಅನ್ನು ಗುರಿಯಾಗಿಸಿಕೊಂಡಿದ್ದು, ಬೀಚ್ ಪ್ರವಾಸೋದ್ಯಮ ವಿಚಾರದಲ್ಲಿ ಭಾರತ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಅಲ್ಲಿ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಮಾಲ್ಡೀವ್ಸ್ಗೆ ಪರ್ಯಾಯವಾಗಿ ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಮಾಡುವಂತೆ ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಇದಾದ ಬಳಿಕ ಮಾಲ್ಡೀವ್ಸ್ ಸಚಿವರ ಹೇಳಿಕೆ ಹೊರಬಿದ್ದಿದೆ.

ಸದ್ಯ ಮಾಲ್ಡೀವ್ಸ್ ಚೀನಾ ಪರವಾಗಿ ಬ್ಯಾಟ್ ಬೀಸುತ್ತಿದ್ದು ಅಲ್ಲಿದ ಭಾರತದ ಸಣ್ಣ ಮಿಲಿಟರಿ ತುಕಡಿಯನ್ನು ವಾಪಸ್ಸು ಕಳುಹಿಸಲು ಮುಂದಾಗಿದೆ.

ಲಕ್ಷದ್ವೀಪವು 32 ಚದರ ಕಿ.ಮೀ ವಿಸ್ತೀರ್ಣದ 36 ದ್ವೀಪಗಳನ್ನು ಒಳಗೊಂಡ ದೇಶದ ಅತಿ ಚಿಕ್ಕ ಕೇಂದ್ರಾಡಳಿತ ಪ್ರದೇಶವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.