ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚೀನಾದಲ್ಲಿ ಭಾರಿ ಮಳೆಯಿಂದಾಗಿ ಸೇತುವೆ ಕುಸಿತ: 11 ಮಂದಿ ಸಾವು, ಹಲವರು ನಾಪತ್ತೆ

Published 20 ಜುಲೈ 2024, 7:15 IST
Last Updated 20 ಜುಲೈ 2024, 7:15 IST
ಅಕ್ಷರ ಗಾತ್ರ

ಬೀಜಿಂಗ್: ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಸೇತುವೆ ಕುಸಿದು ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ಯಾನಿಂಗ್ ಎಕ್ಸ್‌ಪ್ರೆಸ್‌ವೇ ಸೇತುವೆ ಕುಸಿದ ಪರಿಣಾಮ ಐದು ವಾಹನಗಳು ನದಿಗೆ ಬಿದ್ದಿವೆ. ನದಿಯಿಂದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಘಟನೆಯಲ್ಲಿ ಇನ್ನು 20ಕ್ಕೂ ಹೆಚ್ಚು ವಾಹನಗಳು ನದಿಗೆ ಬಿದ್ದಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೇತುವೆ ಕುಸಿತಕ್ಕೆ ಸಂಬಂಧಿಸಿ ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಚೀನಾ ಅಧ್ಯಕ್ಷ ಕ್ಸಿ ಪಿನ್‌ಪಿಂಗ್ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT