ಟೋಕಿಯೊ: ಚೀನಾದ ದುರುದ್ದೇಶಪೂರಿತ ಚಟುವಟಿಕೆಗಳ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಮಂಗಳವಾರ ಕಿಡಿಕಾರಿದ್ದಾರೆ.

ಟೋಕಿಯೊದಲ್ಲಿ ಆಯೋಜಿಸಿರುವ ಏಷ್ಯಾ ಪೆಸಿಫಿಕ್ ಮಿತ್ರರಾಷ್ಟ್ರಗಳ ಚತುಷ್ಕೋನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಭೆಯಲ್ಲಿ ಜಪಾನ್, ಆಸ್ಟ್ರೇಲಿಯಾ ಮತ್ತು ಭಾರತದ ವಿದೇಶಾಂಗ ಸಚಿವರೂ ಭಾಗವಹಿಸಿದ್ದಾರೆ.

‘ಚತುಷ್ಕೋನ ಸಭೆಯ ಬಳಿಕ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ’ ಎಂದೂ ಪಾಂಪಿಯೊ ತಿಳಿಸಿದ್ದಾರೆ.

‘ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಮರೀಸ್ ಪೈನ್ ಜೊತೆಗಿನ ಸಭೆಯ ವೇಳೆ ಪಾಂಪಿಯೊ ಅವರು ಚೀನಾದ ದುರುದ್ದೇಶಪೂರಿತ ಚಟುವಟಿಕೆಗಳ ಬಗ್ಗೆ ಚರ್ಚಿಸಿದ್ದಾರೆ’ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ನ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.