ಮೆಕ್ಸಿಕೊ ಸಿಟಿ: ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ವಾರ ಮೆಕ್ಸಿಕೊದಲ್ಲಿ ಪ್ರಚಾರ ಕಾರ್ಯ ಮುಕ್ತಾಯಗೊಂಡ ಬಳಿಕ ದೇಶದ ವಿವಿಧೆಡೆ ಹಿಂಸಾಚಾರ ಘಟನೆಗಳು ನಡೆದಿದ್ದ ಬೆನ್ನಲ್ಲೇ ಭಾನುವಾರ ಮತದಾನ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮೊರೆನಾ ಪಕ್ಷದ ಕ್ಲಾಡಿಯಾ ಶೀನ್‌ಬಾಮ್ ಮತ್ತು ಒಬ್ರಡಾರ್ ಅವರ ನಡುವೆ ತೀವ್ರ ಪೈಪೋಟಿ ಇದ್ದು, ಇಬ್ಬರಲ್ಲಿ ಯಾರೇ ಗೆಲುವು ಸಾಧಿಸಿದರೂ ಮೆಕ್ಸಿಕೊದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಇದು ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಚುನಾವಣೆಯಾಗಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

ಮತದಾನ ಮಾಡಲು ಜನರನ್ನು ಪ್ರೋತ್ಸಾಹಿಸಲು ಮೆಕ್ಸಿಕೊದ ಅನೇಕ ಅಂಗಡಿಗಳು ಉಚಿತವಾಗಿ ಕೆಲ ವಸ್ತುಗಳನ್ನು ವಿತರಿಸಿದವು. ಕೆಲ ಹೋಟೆಲ್‌ಗಳಲ್ಲಿ ಆಹಾರ ಮತ್ತು ಪಾನೀಯಗಳ ಮೇಲೆ ರಿಯಾಯಿತಿ ನೀಡಲಾಗಿದ್ದರೆ, ಕೆಲವೆಡೆ ಉಚಿತವಾಗಿ ಕಾಫಿ ನೀಡಲಾಯಿತು.

ಪ್ರಚಾರ ಕಾರ್ಯ ಮುಕ್ತಾಯಗೊಂಡ ಬುಧವಾರ ದೇಶದ ವಿವಿಧೆಡೆ ಹಿಂಸಾಚಾರ ಭುಗಿಲೆದ್ದಿತ್ತು. ಕೆಲವೆಡೆ ಅಭ್ಯರ್ಥಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಗಳು ವರದಿಯಾಗಿದ್ದವು. ದಕ್ಷಿಣದ ಗುಯೆರೆರೊ ನಗರದ ಮೇಯರ್ ಸ್ಥಾನದ ಅಭ್ಯರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.