ಲಂಡನ್(ಎಎಫ್‌ಪಿ): ಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಪ್ರಮಾಣದ ಔಷಧಿ ಸೇವನೆ ಮಾಡಬೇಕಾಗಿರುವುದರಿಂದ ಅವರಿಗೆ ಸೇನೆಯಲ್ಲಿ ಕೆಲಸ ಮಾಡುವ ಅವಕಾಶವನ್ನು ನಿರಾಕರಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪ್ರಕಟಿಸಿದ್ದಾರೆ.

ಸೇನೆಯಲ್ಲಿ ಕೆಲಸ ಮಾಡುವಾಗ ಬಳಸುವ ಸೂಚಿತ ಔಷಧಿಗಳ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ ಎಂದು ಅವರುಬ್ರಿಟನ್‌ನ ಐಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

’ಲೈಂಗಿಕ ಅಲ್ಪಸಂಖ್ಯಾತರು ಹೆಚ್ಚಿನ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಶಸ್ತ್ರಚಿಕಿತ್ಸೆ ಮಾಡಿಕೊಂಡ ಬಳಿಕ ಅಂತಹ ಔಷಧಿಗಳ ಅಗತ್ಯ ಅವರಿಗೆ ಇರುತ್ತದೆ. ಆದರೆ ಸೇನೆಯಲ್ಲಿ ಕೆಲಸ ಮಾಡುವಾಗ ನಿರ್ದಿಷ್ಟವಾದ ಔಷಧಿಗಳನ್ನು ಮಾತ್ರ ತೆಗೆದುಕೊಳ್ಳುವ ಅವಕಾಶವಿದೆ.ಆದ್ದರಿಂದ ಅವರನ್ನು ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ಏಪ್ರಿಲ್‌ನಲ್ಲಿಯೇ ನಿಷೇಧಿಸಲಾಗಿದೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ನಲ್ಲಿಯೂ ಹೋರಾಟ ನಡೆಯಿತು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.