ನ್ಯೂಯಾರ್ಕ್: ಅಮೆರಿಕ ಪ್ರವಾಸ ಕೈಗೊಂಡಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಶುಕ್ರವಾರ ಇಲ್ಲಿ ಬಂದಿಳಿದರು.

ಮೀನಾಕ್ಷಿ ಲೇಖಿ ಅವರು ಸೆ.6ರವರೆಗೆ ಕೊಲಂಬಿಯಾ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕದ ಪ್ರಮುಖ ನಾಯಕರನ್ನು ಭೇಟಿಯಾಗುವರು. ಕೊಲಂಬಿಯಾ ಉಪಾಧ್ಯಕ್ಷೆ ಮತ್ತು ವಿದೇಶಾಂಗ ಸಚಿವೆ ಮಾರ್ತಾ ಲೂಸಿಯಾ ರಮಿರೇಜ್ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ವಿದ್ಯಮಾನಗಳ ಕುರಿತು ಸಹ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಸೆ.7 ರಿಂದ 9ರವರೆಗೆ ನ್ಯೂಯಾರ್ಕ್‌ಗೆ ಭೇಟಿ ನೀಡಲಿದ್ದಾರೆ. ’ಶಾಂತಿಪಾಲನೆಗಾಗಿ ವಿಶ್ವಸಂಸ್ಥೆಯ ಕಾರ್ಯಾಚರಣೆ’ ಎಂಬ ವಿಷಯ ಕುರಿತು ಸೆ.8ರಂದು ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆ ನಡೆಯಲ್ಲಿ ಅವರು ಪಾಲ್ಗೊಳ್ಳುವರು. ನಂತರ ಭಾರತೀಯ ಮೂಲದ ಸದಸ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಇವೇ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.