ಬ್ಯಾಂಕಾಕ್:ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರು ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದ್ದು, ಅಲ್ಲಿನ ಸ್ಥಳೀಯ ನ್ಯಾಯಾಲಯವು ಶುಕ್ರವಾರ ಅವರಿಗೆ ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.

ಅಕ್ರಮವಾಗಿ ವಾಕಿ-ಟಾಕಿಗಳನ್ನು ಹೊಂದಿದ್ದಕ್ಕಾಗಿ, ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ, ದೇಶದ್ರೋಹ ಮತ್ತು ಭ್ರಷ್ಟಾಚಾರದ ಆರೋಪದಲ್ಲಿ ಸೂಕಿ ಅವರಿಗೆ ಈಗಾಗಲೇ ಅಲ್ಲಿನ ಮಿಲಿಟರಿ ಸರ್ಕಾರವು 17 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.ಇದೀಗ ಅವರ ಜೈಲುಶಿಕ್ಷೆಯ ಅವಧಿಯು 20 ವರ್ಷಕ್ಕೆ ಹೆಚ್ಚಳವಾಗಿದೆ.

ಇಷ್ಟಲಿಂಗ ಪೂಜೆ ಮಾಡಲು ಮುರುಘಾ ಶರಣರಿಗೆ ಅವಕಾಶ ನಿರಾಕರಣೆ

ಸೂಕಿ ಅವರ ವಿರುದ್ಧ ಕಳೆದ ನವೆಂಬರ್‌ನಲ್ಲಿ ಚುನಾವಣಾ ಆಯೋಗವು ಚುನಾವಣಾ ವಂಚನೆಯ ದೂರನ್ನು ಸಲ್ಲಿಸಿತ್ತು.2020ರ ಸಾಮಾನ್ಯ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಸೂಕಿ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ವಂಚನೆ ಮತ್ತು ಕಾನೂನುಬಾಹಿರ ಕ್ರಮಗಳಲ್ಲಿ ತೊಡಗಿಕೊಂಡಿದ್ದರು ಎಂದು ಆಯೋಗವು ಆರೋಪಿಸಿತ್ತು.

ಶುಕ್ರವಾರ ಅಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಸೂಕಿ ವಿರುದ್ಧದ ಆರೋಪವು ಸಾಬೀತಾಗಿದ್ದು, ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಸೆ.5 ರವರೆಗೆ ಆರೋಪಿ ಶಿವಮೂರ್ತಿ ಮುರುಘಾ ಶರಣರು ಪೊಲೀಸ್ ವಶಕ್ಕೆ

ಸ್ಥಳೀಯ ನ್ಯಾಯಾಲಯವು ನೀಡಿರುವ ತೀರ್ಪು ಸೂಕಿ ಅವರ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷದ ಮೇಲೆ ಮಹತ್ವದ ರಾಜಕೀಯ ಪರಿಣಾಮಗಳನ್ನು ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರೋಧಿಯಾಗಿರುವ ಸೂಕಿ ಅವರ ಪಕ್ಷವು 2023ಕ್ಕೆ ಹೊಸ ಚುನಾವಣೆಗಳನ್ನು ನಡೆಸುವಂತೆ ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.