ಲಾಹೋರ್: ನವ ದಂಪತಿಯನ್ನು ಗುಂಡಿಕ್ಕಿ ಮರ್ಯಾದೆಗೇಡು ಹತ್ಯೆ ಮಾಡಿದ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದವರನ್ನು ಮೊಹಮ್ಮದ್ ಜುಲ್ಫಿಖರ್ (30) ಮತ್ತು ಶಗುಪ್ತಾ ಬಿಬಿ (23) ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಅಪರಿಚಿತರು ಏಕಾಏಕಿ ಮನೆಗೆ ನುಗ್ಗಿ ಗುಂಡು ಹಾರಿಸಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ಕಸೂರ್ ಜಿಲ್ಲೆಯ ಪೂಲಾನಗರ್ ನಿವಾಸಿ. ಶಗುಪ್ತಾಳ ಕುಟುಂಬ ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಆಕೆ ಮನೆ ಬಿಟ್ಟು ಹೋಗಿದ್ದಳು. ವಾರಗಳ ಹಿಂದೆ ಪೋಷಕರಿಗೆ ತಿಳಿಯದಂತೆ ಇಬ್ಬರೂ ಮದುವೆಯಾಗಿದ್ದರು.

ಹತ್ಯೆಗೆ ಸಂಬಂಧಿಸಿದಂತೆ ಶಗುಪ್ತಾಳ ಅಣ್ಣ ಮತ್ತು ತಂದೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತರ ಪ್ರಕಾರ ಪ್ರತಿ ವರ್ಷ ಪಾಕಿಸ್ತಾನದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಪಾಕಿಸ್ತಾನದಲ್ಲಿ ದಾಖಲಾಗುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.