ವೆಲ್ಲಿಂಗ್ಟನ್: ಓಮೈಕ್ರಾನ್ ಪ್ರಕರಣಗಳು ಹೆಚ್ಚಿದಂತೆ ಕೋವಿಡ್ ನಿಯಮಗಳನ್ನು ಕಠಿಣಗೊಳಿಸಿರುವ ನ್ಯೂಜಿಲೆಂಡ್‌ನ ಪ್ರಧಾನಿ ಜೆಸಿಂದಾ ಆರ್ಡೆನ್ ಅವರು ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ್ದಾರೆ.

'ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ' ಎಂದು ಜೆಸಿಂದಾ ಭಾನುವಾರ ಸ್ಪಷ್ಟಪಡಿಸಿದ್ದಾರೆ. ನ್ಯೂಜಿಲೆಂಡ್‌ನಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ವಿವಾಹ ಸಮಾರಂಭಕ್ಕೆ ಪೂರ್ಣವಾಗಿ ಲಸಿಕೆ ಪಡೆದ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ದೀರ್ಘಕಾಲದ ಜೊತೆಗಾರ ಕ್ಲಾರ್ಕ್ ಗೆಫಾರ್ಡ್ ಅವರ ಜೊತೆ ಆರ್ಡೆನ್ ಅವರ ವಿವಾಹವನ್ನು ಮುಂದಿನ ವಾರಗಳಲ್ಲಿ ನಿಶ್ಚಯಿಸಲಾಗಿತ್ತು. ಆದರೆ ದಿನಾಂಕವನ್ನು ಘೋಷಿಸಲಾಗಿರಲಿಲ್ಲ.

ಕೋವಿಡ್ ಕಠಿಣ ನಿಯಮಗಳ ಹೇರಿಕೆಯಿಂದ ತಮ್ಮ ಮದುವೆ ರದ್ಧುಗೊಂಡ ಬಗೆಗಿನ ಪ್ರಶ್ನೆಗೆ 'ಜೀವನ ಎಂದರೆ ಹೀಗೆಯೇ' ಎಂದು ಜೆಸಿಂದಾ ಉತ್ತರಿಸಿದ್ದಾರೆ.

'ಸೋಂಕಿನಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ನ್ಯೂಜಿಲೆಂಡ್ ಸಾವಿರಾರು ಮಂದಿಯಲ್ಲಿ ನಾನೂ ಒಬ್ಬಳು. ಅದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪ್ರೀತಿ ಪಾತ್ರರ ಜೊತೆಗೆ ಇರಲಾಗದೆ ಇರುವ ಸ್ಥಿತಿ ಕರುಳು ಹಿಂಡುವಂತದ್ದಾಗಿದೆ' ಎಂದರು.

ನ್ಯೂಜಿಲೆಂಡ್‌ನಲ್ಲಿ ಇದುವರೆಗೆ 15,104 ಕೋವಿಡ್ 19 ಪ್ರಕರಣಗಳು ವರದಿ ಆಗಿವೆ. 52 ಮಂದಿ ಕೋವಿಡ್ ಕಾರಣದಿಂದ ಮೃತರಾಗಿದ್ದಾರೆ. ಕಳೆದ 2 ವರ್ಷಗಳಿಂದ ಗಡಿಯಲ್ಲಿ ಕಠಿಣ ನಿಯಮಗಳನ್ನು ಪಾಲಿಸಲಾಗುತ್ತಿದೆ.

ಬರೇಲಿ: ಕಾಂಗ್ರೆಸ್ ಅಭ್ಯರ್ಥಿ ಎಸ್ಪಿಗೆ ಸೇರ್ಪಡೆ, ಅದೇ ಕ್ಷೇತ್ರದಿಂದ ಸ್ಪರ್ಧೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.