ಸೋಲ್: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ದಕ್ಷಿಣ ಕೊರಿಯಾದ ಪ್ರತ್ಯೇಕ ಸ್ಥಾನಮಾನವನ್ನು ಬದಲಾಯಿಸಲು ಸಾಂವಿಧಾನಿಕ ತಿದ್ದುಪಡಿಗೆ ಕರೆ ನೀಡಿದ್ದಾರೆ ಎಂದು ಕೊರಿಯಾ ಕೇಂದ್ರ ಸುದ್ದಿ ಸಂಸ್ಥೆ (ಕೆಸಿಎನ್ಎ) ವರದಿ ಮಾಡಿದೆ.

ಸೋಮವಾರ ಸಂಸತ್ತಿನಲ್ಲಿ ಮಾತನಾಡಿದ ಅವರು, ‘ನಮ್ಮ ದೇಶವು ಯುದ್ಧವನ್ನು ಬಯಸುವುದಿಲ್ಲ. ಆದರೆ, ಅದನ್ನು ತಪ್ಪಿಸುವ ಉದ್ದೇಶವಿಲ್ಲ. ದಕ್ಷಿಣ ಕೊರಿಯಾದೊಂದಿಗಿನ ಏಕೀಕರಣವು ಇನ್ನು ಮುಂದೆ ಸಾಧ್ಯವಿಲ್ಲ. ಇದೇ ನಮ್ಮ ಅಂತಿಮ ತೀರ್ಮಾನವಾಗಿದೆ’ ಎಂದು ಹೇಳಿದ್ದಾರೆ.

ಏಕೀಕರಣ ಮತ್ತು ಪ್ರವಾಸೋದ್ಯಮದೊಂದಿಗೆ ವ್ಯವಹರಿಸುವ ಮೂರು ಸಂಸ್ಥೆಗಳನ್ನು ಮುಚ್ಚಲು ಉತ್ತರ ಕೊರಿಯಾ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಕಿಮ್ ಜಾಂಗ್ ಉನ್ ನಿರ್ಧಾರದಿಂದ ಭವಿಷ್ಯದಲ್ಲಿ ನಡೆಯಬಹುದಾದ ಯುದ್ಧದಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಸಮರ್ಪಕವಾಗಿ ಬಳಸಲು ಅನುಕೂಲವಾಗಲಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.
.ಕೆಣಕಿದರೆ ಅಣ್ವಸ್ತ್ರ ಪ್ರಯೋಗ: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ .ದ. ಕೊರಿಯಾ- ಅಮೆರಿಕದ ಸಮರಾಭ್ಯಾಸಕ್ಕೆ ಪ್ರತಿಯಾಗಿ ಉತ್ತರ ಕೊರಿಯಾ ಯುದ್ಧ ತಾಲೀಮು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.