ಲಾಹೋರ್: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಫೆ. 8ರಂದು ಮತದಾನ ನಡೆಯಲಿದ್ದು, ಅರ್ಧಕ್ಕಿಂತ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಅಲ್ಲಿನ ಚುನಾವಣಾ ಆಯೋಗ ಹೇಳಿದೆ.

ದೇಶದಲ್ಲಿ ಒಟ್ಟು 90,675 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 46 ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಅವುಗಳಲ್ಲಿ 18 ಸಾವಿರ ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.

ಪಂಜಾಬ್ ಪ್ರಾಂತ್ಯದಲ್ಲಿ 12,580 ಸೂಕ್ಷ್ಮ ಮತಗಟ್ಟೆಗಳಿವೆ. ಇವುಗಳಲ್ಲಿ 6 ಸಾವಿರ ಮತಗಟ್ಟೆಗಳು ಅತಿ ಸೂಕ್ಷ್ಮ.

ಸಿಂಧ್ ಪ್ರಾಂತ್ಯದಲ್ಲಿ ಪ್ರದೇಶ ಖೈಬರ್ ಪಖ್ತುಂಕ್ವಾ 6,545 ಮತಗಟ್ಟೆಗಳಿವೆ. 6,166 ಸೂಕ್ಷ್ಮ ಹಾಗೂ 4,143 ಮತಗಟ್ಟೆಗಳು ಅತಿಸೂಕ್ಷ್ಮ.

ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಒಟ್ಟು 5,028 ಮತಗಟ್ಟೆಗಳಿವೆ. 2,337 ಸೂಕ್ಷ್ಮ ಹಾಗೂ 1,730 ಅತಿಸೂಕ್ಷ್ಮ ಮತಗಟ್ಟೆಗಳಿವೆ.

‘ಸದ್ಯ ಇಷ್ಟು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಪಟ್ಟಿ ಮಾಡಲಾಗಿದೆ. ಭದ್ರತೆಯ ಸಿದ್ಧತೆ ಪರಿಶೀಲಿಸಿ ಇವುಗಳ ಸಂಖ್ಯೆಗಳನ್ನು ಬದಲಿಸಲಾಗುವುದು’ ಎಂದು ಪಾಕಿಸ್ತಾನ ಚುನಾವಣಾ ಆಯೋಗ (ECP) ಹೇಳಿದೆ.

‘ಪ್ರತಿ ಮತಗಟ್ಟೆಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಮತ ಎಣಿಕೆಗೂ ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸೇನೆಯನ್ನು ನಿಯೋಜಿಸಲಾವುದು’ ಎಂದು ಆಯೋಗ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.