ಇಸ್ಲಾಮಾಬಾದ್: ಪಾಕಿಸ್ತಾನ ಸೇನಾಪಡೆಯ ತರಬೇತಿ ವಿಮಾನ ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು, ಅವಘಡದಲ್ಲಿ ಇಬ್ಬರು ಪೈಲಟ್ ಸೇರಿ 19 ಮಂದಿ ಮೃತಪಟ್ಟಿದ್ದಾರೆ. 14 ಜನರು ಗಾಯಗೊಂಡಿದ್ದಾರೆ.

‘ಸೋಮವಾರ ಮಧ್ಯರಾತ್ರಿ 2.30ಕ್ಕೆ ರಾವಲ್ಪಿಂಡಿಯ ಮೊರಾ ಕಾಲು ಗ್ರಾಮದಲ್ಲಿ ವಿಮಾನ ಪತನವಾಗಿದೆ. ಮೃತರಲ್ಲಿ ಮೂವರು ಸೇನಾ ಸಿಬ್ಬಂದಿ ಹಾಗೂ 14 ನಾಗರಿಕರು ಸಹ ಸೇರಿದ್ದಾರೆ. ಇವರಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ.

ವಿಮಾನ ಪತನಗೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐದಾರು ಮನೆಗಳಿಗೆ ತೀವ್ರ ಹಾನಿಯಾಗಿದೆ’ ಎಂದು ರಾವಲ್ಪಿಂಡಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

‘ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ವೈಮಾನಿಕ ರಕ್ಷಣಾ ವ್ಯವಸ್ಥೆ ಉತ್ತಮವಾಗಿಲ್ಲ. ಈ ಹಿಂದೆಯೂ ಹಲವು ವಿಮಾನಗಳು, ಹೆಲಿಕಾಪ್ಟರ್ಗಳು ಪತನಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.