ಲಾಹೋರ್: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಪುತ್ರಿ ಮರಿಯಂ ನವಾಜ್ ಅವರಿಗೆ ಲಾಹೋರ್ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಅಲಿ ಬಕಾರ್ ನಜಾಫಿ ನೇತೃತ್ವದ ನ್ಯಾಯಪೀಠವು ಜಾಮೀನು ನೀಡಿದೆ.

ತಂದೆಯನ್ನು ನೋಡಿಕೊಳ್ಳಲು ಮಾನವೀಯತೆಯ ಆಧಾರದಲ್ಲಿ ಜಾಮೀನು ನೀಡಬೇಕೆಂದು ಕೋರಿ ಮರಿಯಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಮರಿಯಂ ಅವರ ಸಹೋದರಿ ಹಾಗೂ ಇಬ್ಬರು ಸಹೋದರರು ಲಂಡನ್‌ನಲ್ಲಿ ನೆಲೆಸಿದ್ದಾರೆ.

ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆಷರೀಫ್ ಅವರ ಇಬ್ಬರು ಪುತ್ರರನ್ನು ಘೋಷಿತ ಅಪರಾಧಿಗಳು ಎಂದು ಭ್ರಷ್ಟಾಚಾರ ತಡೆ ನ್ಯಾಯಾಲಯ ಘೋಷಿಸಿದೆ.

ಪಾಕಿಸ್ತಾನ ಮುಸ್ಲಿಂ ಲೀಗ್–ನವಾಜ್ (ಪಿಎಂಎಲ್–ಎನ್) ಪಕ್ಷದ ಉಪಾಧ್ಯಕ್ಷೆಯಾಗಿರುವ ಮರಿಯಂ ಅವರನ್ನು ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ನವಾಜ್ ಷರೀಫ್ ಅವರಿಗೆ ಚಿಕಿತ್ಸೆಗಾಗಿ ಏಳು ವಾರಗಳ ಜಾಮೀನು ಲಭಿಸಿದ್ದು, ಅವರು ಲಾಹೋರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.