ಇಸ್ಲಾಮಾಬಾದ್: ಪಾಕಿಸ್ತಾನದ ಚುನಾವಣಾ ಆಯೋಗವು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಇಮ್ರಾನ್ ಖಾನ್ ಅವರ ಆಪ್ತರೂ ಆಗಿರುವ ಖುರೇಷಿ, ದೇಶದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇಸ್ಲಾಮಾಬಾದ್ನ ವಿಶೇಷ ನ್ಯಾಯಾಲಯ ಇದೇ ಪ್ರಕರಣದಲ್ಲಿ ಇಮ್ರಾನ್ ಅವರಿಗೂ 10 ವರ್ಷ ಜೈಲು ವಿಧಿಸಿತ್ತು.

‘ಅಪರಾಧ ಸಾಬೀತಾಗಿರುವ ಯಾವುದೇ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಆದ್ದರಿಂದ ಖುರೇಷಿ ಅವರನ್ನು ಅನರ್ಹಗೊಳಿಸಲಾಗಿದೆ’ ಎಂದು ಚುನಾವಣಾ ಆಯೋಗ ಹೇಳಿರುವುದಾಗಿ ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ. ಐದು ವರ್ಷಗಳ ಕಾಲ ರಾಜಕೀಯ ಚಟುವಟಿಕೆ ನಡೆಸದಂತೆ ಇಮ್ರಾನ್ ಖಾನ್ ಮೇಲೆ ಈ ಹಿಂದೆಯೇ ನಿರ್ಬಂಧ ಹೇರಲಾಗಿತ್ತು.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಇದೇ 8 ರಂದು ನಡೆಯಲಿದ್ದು, ಇಮ್ರಾನ್ ನೇತೃತ್ವದ ತೆಹ್ರೀಕ್ ಎ ಇನ್ಸಾಫ್ ಪಕ್ಷ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.