ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವಂಚನೆ ಮೂಲಕ 625 ಎಕರೆ ಭೂಮಿಯನ್ನು ಅತಿ ಕಡಿಮೆ ಬೆಲೆಗೆ ಖರೀದಿ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಭಾನುವಾರ ಮತ್ತೊಂದು ಪ್ರಕರಣ ದಾಖಲಾಗಿದೆ.

ಇದರೊಂದಿಗೆ ಪಿಟಿಐ ಮುಖ್ಯಸ್ಥರ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆ 140ಕ್ಕೆ ಏರಿದೆ. ಖಾನ್ ವಿರುದ್ಧ ಭಯೋತ್ಪಾದನೆ, ಹಿಂಸಾಚಾರ, ಧರ್ಮನಿಂದನೆ, ಕೊಲೆ ಯತ್ನ, ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ.

ಪಂಜಾಬ್ನ ಲಯ್ಯಾ ಜಿಲ್ಲೆಯಲ್ಲಿ ಬಹಳ ವರ್ಷಗಳಿಂದ ವಾಸಿಸುತ್ತಿದ್ದ ನಿವಾಸಿಗಳಿಂದ ಕಡಿಮೆ ಬೆಲೆಗೆ ಭೂಮಿಯನ್ನು ಖರೀದಿಸಿದ್ದಾರೆ. ₹ 600 ಕೋಟಿ ಬೆಲೆ ಬಾಳುವ ಭೂಮಿಯನ್ನು ರಾಜಕೀಯ ಪ್ರಭಾವ ಬಳಸಿ ₹ 13 ಕೋಟಿಗೆ ಖರೀದಿ ಮಾಡಿದ್ಧಾರೆ ಎಂದು ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಇ) ಆರೋಪಿಸಿದೆ.

ಇಮ್ರಾನ್ ಖಾನ್ ಸಹೋದರಿ ಉಜ್ಮಾ ಖಾನ್, ಆಕೆಯ ಪತಿ ಹಾಗೂ ಪಂಜಾಬ್ನ ಮುಖ್ಯಮಂತ್ರಿ ಉಸ್ಮನ್ ಬುಜ್ದರ್ ಅವರ ಹೆಸರೂ ಸೇರಿದ್ದು, ಭಾನುವಾರ ಅವರನ್ನು ಬಂಧಿಸಲು ಹೋದಾಗ ಅವರು ಪರಾರಿಯಾಗಿದ್ಧಾರೆ ಎಂದು ಎಸಿಇ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.