ಇಸ್ಲಾಮಾಬಾದ್: ವಾಟ್ಸ್ಆ್ಯಪ್ ಸಂದೇಶಗಳ ಮೂಲಕ ಧರ್ಮನಿಂದನೆ ಮಾಡಿದ ಆರೋಪ ಸಾಭೀತಾದ ಮೇಲೆ ಪಾಕಿಸ್ತಾನದ 22 ವರ್ಷದ ವಿದ್ಯಾರ್ಥಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಪ್ರವಾದಿ ಮಹಮ್ಮದ್ ಅವರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ಧರ್ಮನಿಂದನೆ ಮಾಡಿ, ವಾಟ್ಸ್ಆ್ಯಪ್ನಲ್ಲಿ ಫೋಟೊ ಮತ್ತು ವಿಡಿಯೊ ಸಂದೇಶಗಳನ್ನು ಕಳುಹಿಸಿರುವುದಕ್ಕೆ ವಿದ್ಯಾರ್ಥಿಗೆ ಇಲ್ಲಿನ ಪಂಜಾಬ್ ಪ್ರಾಂತ್ಯದ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಬಿಬಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದೇ ಪ್ರಕರಣದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ( 17 ವರ್ಷ) ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈತ ಅಪ್ರಾಪ್ತ ವಯಸ್ಕನಾಗಿದ್ದರಿಂದ ಮರಣದಂಡನೆ ಬದಲು ಜೀವಾವಧಿ ಶಿಕ್ಷೆ ನೀಡಲಾಗಿದೆ.

ಪಾಕಿಸ್ತಾನದಲ್ಲಿ ಧರ್ಮನಿಂದನೆ ಮಾಡಿದವರನ್ನು ಮರಣದಂಡನೆ ಶಿಕ್ಷೆಗೆ ಗುರಿ ಮಾಡಲಾಗುವುದು. ಆದಾಗ್ಯೂ, ಇಲ್ಲಿಯವರೆಗೂ ಧರ್ಮನಿಂದನೆ ಪ್ರಕರಣದಲ್ಲಿ ಯಾರನ್ನೂ ಗಲ್ಲಿಗೇರಿಸಿಲ್ಲ, ಆದರೆ ಇಂತಹ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನು ಆಕ್ರೋಶಗೊಂಡ ಗುಂಪುಗಳು ಥಳಿಸಿ ಹತ್ಯೆ ಮಾಡಿವೆ.

ಲಾಹೋರ್ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ಸೈಬರ್ ಕ್ರೈಮ್ ಘಟಕದಲ್ಲಿ ದೂರು ದಾಖಲಾಗಿತ್ತು. ನಂತರ ಘಟನೆ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.