ಪೇಷಾವರ: ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಅರೆಸೇನಾ ಪಡೆಯ ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 41 ಜನರು ಮೃತಪಟ್ಟಿದ್ದಾರೆ.
ADVERTISEMENT
ADVERTISEMENT
ಘಟನೆಯಲ್ಲಿ 18 ಯೋಧರು ಮತ್ತು 23 ಜನ ಉಗ್ರರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಸೈಯದ್ ಮುನೀರ್ ಬಲೂಚಿಸ್ತಾನ ಪ್ರಾಂತ್ಯಕ್ಕೆ ಭೇಟಿ ನೀಡಿದ ನಂತರ ಈ ಘಟನೆ ನಡೆದಿದೆ.
ಇಲ್ಲಿನ ಮಂಗೋಚಾರ್ ಗ್ರಾಮದ ಸಮೀಪದಲ್ಲಿ ಯೋಧರು ಪ್ರಯಾಣಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಯೋಧರು ಪ್ರತಿದಾಳಿ ನಡೆಸಿದ್ದು 23 ಉಗ್ರರನ್ನು ಹತ್ಯೆ ಮಾಡಿದ್ದಾರೆ. 20ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯಾವುದೇ ಸಂಘಟನೆ ಈ ದಾಳಿಯ ಹೊಣೆ ವಹಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ADVERTISEMENT
ಬಲೂಚಿಸ್ತಾನ ಪ್ರಾಂತದಲ್ಲಿ ಬಂಡುಕೋರ ಚಟುವಟಿಕೆ ನಡೆಸುತ್ತಿರುವ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ(ಬಿಎಲ್‍ಎ) ಇತ್ತೀಚಿನ ದಿನಗಳಲ್ಲಿ ಸಕ್ರಿಯವಾಗಿದ್ದು ಭದ್ರತಾ ಪಡೆಗಳ ಮೇಲೆ ದಾಳಿ ಮಾಡುತ್ತಿದೆ.