ಇಸ್ಲಾಮಾಬಾದ್: ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ, 2008ರ ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ನ ಮೂವರು ಆಪ್ತರಿಗೆ ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ 16 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಈ ತೀರ್ಪು ಪ್ರಕಟಿಸಲಾಗಿದೆ.

ಈ ಮೂವರಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ, ಹಫೀಜ್ ಅದ್ಬುಸ್ ಸಲಾಮ್ ಸಹ ಸೇರಿದ್ದಾರೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಮತ್ತೊಂದು ಪ್ರಕರಣದಲ್ಲಿ ಇವರ ವಿರುದ್ಧ ನೀಡಲಾಗಿದ್ದ ತೀರ್ಪನ್ನು ಲಾಹೋರ್ ಹೈಕೋರ್ಟ್ ಅಮಾನತುಗೊಳಿಸಿತ್ತು. ಬಳಿಕ ಜಾಮೀನು ಪಡೆದು ಅವರು ಬಿಡುಗಡೆಯಾಗಿದ್ದರು.

ಇದನ್ನೂ ಓದಿ:ಆಳ–ಅಗಲ: ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ನಿರ್ಬಂಧ

‘ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಮತ್ತೊಂದು ಪ್ರಕರಣದಲ್ಲಿ ಜಾಫರ್ ಇಕ್ಬಾಲ್ ಮತ್ತು ಹಫೀಜ್ ಅಬ್ದುಸ್ ಸಲಾಮ್ ಬಿನ್ ಮುಹಮ್ಮದ್ಗೆ ಹದಿನಾರೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತಲಾ 1.5 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಕೋರ್ಟ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ 88 ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ ಇತ್ತೀಚೆಗಷ್ಟೇ ಕಠಿಣ ಹಣಕಾಸು ನಿರ್ಬಂಧ ವಿಧಿಸಿತ್ತು. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್ಎಟಿಎಫ್) ‘ಬೂದು ಪಟ್ಟಿ’ಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಈ ಕ್ರಮ ಕೈಗೊಂಡಿತ್ತು.

ಇದನ್ನೂ ಓದಿ:ದಾವೂದ್ ಇಬ್ರಾಹಿಂ ಕರಾಚಿಯಲ್ಲಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡ ಪಾಕಿಸ್ತಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.