ಇಸ್ಲಾಮಾಬಾದ್: ವಿದ್ಯುತ್, ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ. ಭಾನುವಾರದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ ₹35 ಹೆಚ್ಚಿಸಿದೆ.

ವಿತ್ತ ಸಚಿವ ಇಶಾಕ್ ದಾರ್ ಬೆಲೆ ಏರಿಕೆ ಘೋಷಿಸಿದ್ದಾರೆ. ಸೀಮೆ ಎಣ್ಣೆ ಮತ್ತು ಲೈಟ್ ಡೀಸೆಲ್ ಬೆಲೆಗಳನ್ನು ಲೀಟರ್ಗೆ ₹18 ಹೆಚ್ಚಿಸಲಾಗಿದೆ ಎಂದು ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪೆಟ್ರೋಲಿಯಂ ಕೊರತೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕೃತಕ ಕೊರತೆ ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ.

ಇಂದಿನ ಏರಿಕೆಯೊಂದಿಗೆ, ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ₹249.80 ಆಗಿದ್ದರೆ, ಡೀಸೆಲ್ ಲೀಟರ್ಗೆ ₹262.80, ಸೀಮೆ ಎಣ್ಣೆ ಲೀಟರ್ಗೆ ₹189.83 ಮತ್ತು ಡೀಸೆಲ್ ಉಪ ಉತ್ಪನ್ನ ಬೆಲೆ ₹187 ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.