ಪೆಶಾವರ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪೊಲೀಸ್ ಚೆಕ್ಪೋಸ್ಟ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ಆತ್ಮಾಹುತಿ ದಾಳಿಗೆ 6 ರಕ್ಷಣಾ ಸಿಬ್ಬಂದಿ ಸೇರಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಸ್ತಾನ್ ಜಿಲ್ಲೆಯ ಮಿರ್ ಅಲಿ ತೆಹ್ಸಿಲ್ನ ಅಸ್ಲಂ ಚೆಕ್ಪೋಸ್ಟ್ನಲ್ಲಿ ಸ್ಫೋಟ ಸಂಭವಿಸಿದೆ.
.ಪಾಕಿಸ್ತಾನ: 9 ಉಗ್ರರ ಹತ್ಯೆಗೈದ ಸೇನೆ .
ತ್ರಿಚಕ್ರ ವಾಹನದಲ್ಲಿ ಬಂದ ಆತ್ಮಾಹುತಿ ದಾಳಿಕೋರರು ಚೆಕ್ಪೋಸ್ಟ್ ಹಾಗೂ ಸ್ಥಳದಲ್ಲಿ ನಿಂತಿದ್ದ ಭದ್ರತಾ ಪಡೆಗಳ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ನಾಲ್ವರು ಪೊಲೀಸ್ ಸಿಬ್ಬಂದಿ, ಇಬ್ಬರು ಸೈನಿಕರು ಹಾಗೂ ಇಬ್ಬರು ನಾಗರಿಕರು ಸಾವಿಗೀಡಾಗಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು ನೋವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಘಟನೆಯ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ.

ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಖೈಬರ್ ಪಖ್ತುಂಖ್ವಾ ಗವರ್ನರ್ ಫೈಸಲ್ ಕರೀಮ್ ಕುಂದಿ ಘಟನೆಯನ್ನು ಖಂಡಿಸಿದ್ದಾರೆ.
.ಪಾಕಿಸ್ತಾನ: ಕ್ಯಾಂಪಸ್ ಪ್ರತಿಭಟನೆಯಲ್ಲಿ 30 ವಿದ್ಯಾರ್ಥಿಗಳಿಗೆ ಗಾಯ .
‘ಉಗ್ರವಾದದ ವಿರುದ್ಧ ಹೋರಾಡಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ತ್ಯಾಗವನ್ನು ಬಹುಕಾಲ ನೆನಪಿನಲ್ಲಿಟ್ಟುಕೊಳ್ಳಲಾಗುವುದು. ಇಡೀ ಪ್ರದೇಶದಿಂದ ಉಗ್ರವಾದವನ್ನು ತೊಡೆದು ಹಾಕುವವರೆಗೆ ಅವರ ವಿರುದ್ಧದ ಹೋರಾಟ ಮುಂದುವರಿಯಲಿದೆ’ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ಉಗ್ರವಾದ ಚಟುವಟಿಕೆಗಳು ಗಮನಾರ್ಹವಾಗಿ ಏರಿಕೆಯಾಗುತ್ತಿದ್ದು, ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ಈ ತಿಂಗಳಿನಲ್ಲೇ ಸುಮಾರು 12ರಷ್ಟು ಭಯೋತ್ಪಾದಕರನ್ನು ಕೊಲ್ಲಲಾಗಿದೆ.
.ಪಾಕಿಸ್ತಾನ | ಪ್ರಯಾಣಿಕ ವಾಹನದ ಮೇಲೆ ಗುಂಡಿನ ದಾಳಿ: 11 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.