ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ‘ಬಲೂಚಿಸ್ತಾನ್ ಲಿಬರೇಷನ್ ಆರ್ಮಿ’ (ಬಿಎಲ್‌ಎ) ಸಂಘಟನೆಯ ಕನಿಷ್ಠ 6 ಜನ ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್ ಮತ್ತು ಅಫ್ಗಾನಿಸ್ತಾನದ ಗಡಿಯಲ್ಲಿರುವ ಬಲೂಚಿಸ್ತಾನ್ ಪ್ರಾಂತ್ಯದ ಹಾರ್ನೈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಅಮಾಯಕರ ಮೇಲೆ ನಡೆದ ದಾಳಿಯಲ್ಲಿ ನೇರವಾಗಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಭದ್ರತಾ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ ಸಮಯದ ಕುರಿತು ಮಾಹಿತಿ ಲಭ್ಯವಾಗಿಲ್ಲ. ಬಿಎಲ್‌ಎಗೆ ಇದು ದೊಡ್ಡ ಹೊಡೆತವಾಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ‘ರೇಡಿಯೊ ಪಾಕಿಸ್ತಾನ’ ವರದಿ ಮಾಡಿದೆ.

ಹಲವು ವರ್ಷಗಳಿಂದ ಬಲೂಚಿಸ್ತಾನ ಪ್ರಕ್ಷುಬ್ಧ ಪ್ರದೇಶವಾಗಿದ್ದು, ಪ್ರತ್ಯೇಕವಾದಿಗಳು ಭದ್ರತಾ ಪಡೆಗಳು ಹಾಗೂ ನಾಗರಿಕರ ಮೇಲೆ ಆಗಾಗ ದಾಳಿ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.