ಕೊಲಂಬೊ: ರಾಜಪಕ್ಸ ಸಹೋದರರು ಹಾಗೂ ಈ ಹಿಂದಿನ ಸರ್ಕಾರದಲ್ಲಿದ್ದ ಕೆಲ ಪ್ರಭಾವಿ ಅಧಿಕಾರಿಗಳು ದೇಶ ತೊರೆಯುವುದನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ನೀಡಬೇಕು ಎಂದು ಕೋರಿ ಶ್ರೀಲಂಕಾದ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

‘ಅರ್ಜಿಯಲ್ಲಿ ಹೆಸರಿಸಲಾಗಿರುವ ಕೆಲವರು ದೇಶ ತೊರೆಯಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಹಾಗಾಗಿ, ಅರ್ಜಿಯ ತುರ್ತು ವಿಚಾರಣೆ ಅಗತ್ಯವಿದ್ದು, ಜುಲೈ 14ರಂದು ವಿಚಾರಣೆ ನಡೆಸಬೇಕು ಎಂಬುದಾಗಿ ಅರ್ಜಿದಾರರು ಕೋರಿದ್ದಾರೆ’ ಎಂದು ಸ್ಥಳೀಯ ಮಾಧ್ಯಮವೊಂದು ಮಂಗಳವಾರ ವರದಿ ಮಾಡಿದೆ.

ಈಜುಪಟು ಹಾಗೂ ತರಬೇತುದಾರ ಜೂಲಿಯನ್ ಬೊಲಿಂಗ್, ಸಿಲೋನ್ ವಾಣಿಜ್ಯ ಸಂಸ್ಥೆಯ ಮಾಜಿ ಚೇರಮನ್ ಚಂದ್ರ ಜಯರತ್ನೆ, ಉದ್ಯಮಿ ಜೆಹಾನ್ ಕನಗರತ್ನೆ ಹಾಗೂ ಇತರರು ಅರ್ಜಿ ಸಲ್ಲಿಸಿದ್ದಾರೆ.

ದೇಶ ತೊರೆಯಲು ಮುಂದಾಗಿದ್ದ, ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸ ಅವರನ್ನು ಕೊಲಂಬೊ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.