ನವದೆಹಲಿ: ಕೆನಡಾದಲ್ಲಿ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ನಡೆಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಎಂದು ಟೀಕಿಸಿದ್ದಾರೆ.

ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾ ಸರ್ಕಾರವು ಕಾನೂನನ್ನು ಎತ್ತಿಹಿಡಿದು ನ್ಯಾಯವನ್ನು ನೀಡಲಿದೆ ಎನ್ನುವ ನಿರೀಕ್ಷೆಯಿದೆ ಎಂದು ಮೋದಿ ಹೇಳಿದ್ದಾರೆ.

ದೇಗುಲದಲ್ಲಿ ಭಕ್ತರ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವಾಲಯ, ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನು ಭಾರತ ಖಂಡಿಸುತ್ತದೆ. ಈ ರೀತಿಯ ದಾಳಿಗಳಿಂದ ಕೆನಡಾ ಸರ್ಕಾರವು ತನ್ನ ಪ್ರಜೆಗಳನ್ನು ರಕ್ಷಿಸಬೇಕು ಎಂದು ಭಾರತ ಆಗ್ರಹಿಸಿದೆ.

ಭಾರತ ಹೊರತುಪಡಿಸಿದರೆ ಜಗತ್ತಿನಲ್ಲಿ ಸಿಖ್ಖರು ಹೆಚ್ಚಿನ ಸಂಖ್ಯೆಯಲ್ಲಿರುವ 2ನೇ ರಾಷ್ಟ್ರವೇ ಕೆನಡಾ. ಭಾರತದಲ್ಲಿ ಧರ್ಮಾಧಾರಿತ ಪ್ರತ್ಯೇಕ ರಾಜ್ಯದ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿರುವ ಖಾಲಿಸ್ತಾನ ಹೋರಾಟಗಾರರೂ ಕೆನಡಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
.ಕೆನಡಾ | ಹಿಂದೂ ಸಭಾ ದೇವಾಲಯದಲ್ಲಿ ನಡೆದ ಹಿಂಸಾಚಾರ ಖಂಡಿಸಿದ ಭಾರತ.ಕೆನಡಾ: ಹಿಂದೂ ದೇಗುಲಕ್ಕೆ ಹಾನಿ, ಭಾರತ ವಿರೋಧಿ ಬರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.