ಜಕಾರ್ತಾ: ಗುರುವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಕಾರ್ತಾ ತಲುಪಿದರು. ಆಸಿಯಾನ್-ಭಾರತ (ASEAN-India) ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಇಂಡೋನೇಷ್ಯಾಗೆ ಆಗಮಿಸಿದ್ದಾರೆ.

ಭೇಟಿಯ ವೇಳೆ ಅವರು ಗಡಿ ಪ್ರದೇಶಗಳಲ್ಲಿನ ಪ್ರಮುಖ ದೇಶಗಳೊಂದಿಗೆ ಭಾರತದ ಪಾಲುದಾರಿಕೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.

‘ಜಕಾರ್ತಾದಲ್ಲಿ ಬಂದಿಳಿದೆ. ವಿವಿಧ ನಾಯಕರೊಂದಿಗೆ ASEAN ಸಂಬಂಧಿತ ಮಾತುಕತೆ ನಡೆಸಲು ಎದುರು ನೋಡುತ್ತಿದ್ದೇನೆ’ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಜಕಾರ್ತಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು. ಮಹಿಳಾ ಸಬಲೀಕರಣ ಮತ್ತು ಮಕ್ಕಳ ರಕ್ಷಣಾ ಸಚಿವರಾದ ಐ.ಗುಸ್ತಿ ಆಯು ಬಿಂಟಾಂಗ್ ದರ್ಮಾವತಿ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು.

ವಿಮಾನ ನಿಲ್ದಾಣದಲ್ಲಿ ಇಂಡೋನೇಷ್ಯಾ ಸಾಂಸ್ಕೃತಿಕ ನೃತ್ಯವನ್ನು ಪ್ರದರ್ಶಿಸಲಾಯಿತು.

ಇದೇ 9 ಮತ್ತು 10 ರಂದು ಜಿ 20 ಶೃಂಗಸಭೆ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಸಭೆ ಮುಗಿದ ತಕ್ಷಣ ಅವರು ದೆಹಲಿಗೆ ವಾಪಸ್ಸಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.