ಅಬುಜಾ(ನೈಜೀರಿಯಾ): ಉತ್ತರ ನೈಜೀರಿಯಾದ ನೈಜರ್ ನದಿಯಲ್ಲಿ ದೋಣಿಯೊಂದು ಮಗುಚಿದ ಪರಿಣಾಮ ಕನಿಷ್ಠ 100 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

‘ಈ ದುರಂತ ಸೋಮವಾರ ಸಂಭವಿಸಿದೆ. ಬದುಕುಳಿದವರ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ’ ಎಂದು ಪೊಲೀಸ್ ಇಲಾಖೆ ವಕ್ತಾರ ಒಕಾಸಾನ್ಮಿ ಅಜಯಿ ಹೇಳಿದ್ದಾರೆ.

ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸಹ ಇದ್ದು, ತಡರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗುತ್ತಿದ್ದರು.

ತಡರಾತ್ರಿ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಹಲವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.