ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಮತದಾನ ಆರಂಭ

Published : 21 ಸೆಪ್ಟೆಂಬರ್ 2024, 3:09 IST
Last Updated : 21 ಸೆಪ್ಟೆಂಬರ್ 2024, 3:09 IST
ಫಾಲೋ ಮಾಡಿ
Comments

ಕೊಲಂಬೊ: 2022ರಲ್ಲಿ ಆರ್ಥಿಕ ಬಿಕ್ಕಟ್ಟಿನ ಬಳಿಕ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಇಂದು (ಶನಿವಾರ) ಮತದಾನ ಆರಂಭವಾಗಿದೆ.

13,400 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 1.70 ಲಕ್ಷ ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಭಾನುವಾರ ಫಲಿತಾಂಶ ಪ್ರಕಟವಾಗಲಿದೆ.

ಹಾಲಿ ಅಧ್ಯಕ್ಷ ರಾನಿಲ್‌ ವಿಕ್ರಮ್‌ಸಿಂಘೆ ಅವರು ಚುನಾವಣಾ ಕಣದಲ್ಲಿದ್ದಾರೆ. ಇವರಿಗೆ ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್‌ (ಎನ್‌ಪಿಪಿ) ಪಕ್ಷದ ಅಧ್ಯಕ್ಷ ಅನುರಕುಮಾರ ದಿಸನಾಯಕೆ ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕ, ಸಮಾಗಿ ಜನ ಬಲವೆಗಯ ಪಕ್ಷದ ಸಜಿತ್‌ ಪ್ರೇಮದಾಸ ಅವರು ಸ್ಪರ್ಧಿಸಿದ್ದಾರೆ.

‘1982ರ ಬಳಿಕ ಶ್ರೀಲಂಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಮೂವರು ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವುದು ಇದೇ ಮೊದಲು’ ಎಂದು ರಾಜಕೀಯ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT