ವಾಷಿಂಗ್ಟನ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಅವರು ಮುಂದಿನ ವಾರ ಮಾಲ್ಡೀವ್ಸ್ಗೆ ಭೇಟಿ ನೀಡಲಿದ್ದು, 16 ವರ್ಷಗಳಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯೊಬ್ಬರು ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಮುಂದಿನ ವಾರ ಮೈಕ್ ಪಾಂಪಿಯೊ ಅವರು ಏಷ್ಯಾ ಪ್ರವಾಸ ಕೈಗೊಳ್ಳಲಿದ್ದು, ಭಾರತ, ಮಾಲ್ಡೀವ್ಸ್, ಶ್ರೀಲಂಕಾ ಮತ್ತು ಇಂಡೋನೇಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ನಾಯಕರು ಮಾತುಕತೆ ನಡೆಸಲಿದ್ದಾರೆ.

ಟ್ರಂಪ್ ಸರ್ಕಾರವು ಚೀನಾದ ಪ್ರಭಾವವನ್ನು ಕಡಿಮೆಗೊಳಿಸಲು ಇಂಡೋ–ಫೆಸಿಫಿಕ್ ರಾಷ್ಟ್ರಗಳೊಂದಿಗೆ ಸಂಬಂಧವನ್ನು ವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಪ್ರವಾಸ ಕೈಗೊಳ್ಳಲಾಗಿದೆ ಎನ್ನಲಾಗಿದೆ.

1992ರಲ್ಲಿ ಮೊದಲ ಬಾರಿಗೆ ಆಗಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಬೇಕರ್ ಮಾಲ್ಡೀವ್ಸ್ಗೆ ಭೇಟಿ ನೀಡಿದ್ದರು. ಈ ಬಳಿಕ 2004ರಲ್ಲಿ ಕೊಲಿನ್ ಪೊವೆಲ್ ಮಾಲ್ಡೀವ್ಸ್ಗೆ ತೆರಳಿದ್ದರು. ಇದೀಗ 16 ವರ್ಷಗಳ ನಂತರ ಮೈಕ್ ಪಾಂಪಿಯೊ ಭೇಟಿ ನೀಡಲಿದ್ದಾರೆ.

ಪಾಂಪಿಯೊ ಅವರು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಮತ್ತು ವಿದೇಶಾಂಗ ಸಚಿವ ಅಬ್ದುಲ್ ಶಹೀದ್ ಅವರನ್ನು ಭೇಟಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.