ಲಂಡನ್: ಕನ್ಸರ್ವೇಟಿವ್ ಪಕ್ಷದ ಪ್ರೀತಿ ಪಟೇಲ್ ಅವರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಬ್ರಿಟನ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಈ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ, ಭಾರತ ಮೂಲದವರೊಬ್ಬರು ಈ ಹುದ್ದೆಗೆ ಸ್ಪರ್ಧಿಸುತ್ತಿರುವುದು ಸಹ ಇದೇ ಮೊದಲ ಬಾರಿಯಾಗಿದೆ.

ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಸದ್ಯ ಹಂಗಾಮಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

‘ನನ್ನ ನಾಯಕತ್ವದಲ್ಲಿ ಪಕ್ಷವನ್ನು ಮತ್ತೊಮ್ಮೆ ‘ಗೆಲುವಿನ ಯಂತ್ರ’ವನ್ನಾಗಿಸುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ’ ಎಂದು ಪ್ರೀತಿ ಅವರು ನಾಮಪತ್ರ ಸಲ್ಲಿಸುವ ವೇಳೆ ಹೇಳಿದ್ದಾರೆ.

ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದೆ. ಹಲವು ಮಾಜಿ ಸಚಿವರೂ ಈ ಸ್ಪರ್ಧೆಯಲ್ಲಿದ್ದಾರೆ. ಪ್ರೀತಿ ಪಟೇಲ್ ಅವರು ಈ ಹಿಂದೆ ಬ್ರಿಟನ್ನ ಗೃಹ ಕಾರ್ಯದರ್ಶಿಯಾಗಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆಗಸ್ಟ್ನಲ್ಲಿ ಪ್ರಚಾರ ಹಾಗೂ ಅಕ್ಟೋಬರ್ನಲ್ಲಿ ಮತದಾನ ನಡೆಯಲಿದೆ. ಸುನಕ್ ಅವರು ನವೆಂಬರ್ 2ರವರೆಗೆ ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.